ಬೆಳಗಾವಿ: ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ಕಾರ್ಮಿಕರ ಬೇಡಿಕೆ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್ ಉದ್ಯಮಿಗಳನ್ನು ಕೋರಿದ್ದಾರೆ.

‘ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹೆಚ್ಚಿನ ಕೈಗಾರಿಕೆಗಳು ಬಂಡವಾಳ, ಮಾರುಕಟ್ಟೆ ಸಮಸ್ಯೆ ಮತ್ತು ಕಾರ್ಮಿಕರ ಕೊರತೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿವೆ. ಇಲ್ಲಿದ್ದ ಕಾರ್ಮಿಕರು ಅವರವರ ರಾಜ್ಯಗಳಗೆ ವಲಸೆ ಹೋಗಿರುವ ಕಾರಣ ಕಾರ್ಮಿಕರ ಕೊರತೆ ಉಂಟಾಗಿದೆ. ಇದರಿಂದ ಕೈಗಾರಿಕಾ ಅಭಿವೃದ್ಧಿ ಕುಂಠಿತವಾಗಿದೆ. ಇದೇ ವೇಳೆ, ಹೊರರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದ 4ಸಾವಿರ ಕಾರ್ಮಿಕರು ಜಿಲ್ಲೆಗೆ ಮರಳಿದ್ದಾರೆ. ಅವರ ವಿದ್ಯಾರ್ಹತೆ, ಕೌಶಲ, ಅನುಭವ ಇತ್ಯಾದಿ ವಿವರಗಳನ್ನು ಜಿಲ್ಲಾ ಪಂಚಾಯಿತಿಯಿಂದ ಕ್ರೋಢೀಕರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಹೊರ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಮತ್ತು ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಕೈಗಾರಿಕೆಗಳಿಗೆ ಬೇಕಾದ ಕೌಶಲ ಒದಗಿಸಿ, ಕೈಗಾರಿಕೆಗಳಲ್ಲಿ ಉದ್ಯೋಗ ಸಿಗುವಂತ ಮಾಡಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಸೇತುವೆಯಾಗಿ ಕಾರ್ಯನಿರ್ವಹಿಸಲು ಸಿದ್ಧವಿದೆ’ ಎಂದು ಮಾಹಿತಿ ನೀಡಿದ್ದಾರೆ.

ಆಸಕ್ತ ಕೈಗಾರಿಕೋದ್ಯಮಿಗಳು ಹೆಚ್ಚಿನ ಮಾಹಿತಿಗೆ ಮೊ: 9449224464 (ಎಸ್.ಬಿ. ಹುಕ್ಕೇರಿ, ಉಪನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.