ಸೋಮವಾರ, ಮಾರ್ಚ್ 8, 2021
31 °C

‘ಒಂದಿಬ್ಬರು ಶಾಸಕರ ರಾಜೀನಾಮೆಯಿಂದ ಏನೂ ಆಗಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಒಂದಿಬ್ಬರಾಗಲೀ, ಮೂರ್ನಾಲ್ಕು ಶಾಸಕರಾಗಲಿ ರಾಜೀನಾಮೆ ನೀಡಿದರೆ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಪತನವಾಗಲು ಕನಿಷ್ಠ 15 ಶಾಸಕರ ರಾಜೀನಾಮೆ ನೀಡಬೇಕು. ಆದರೆ, ಅಷ್ಟೊಂದು ಪ್ರಮಾಣದಲ್ಲಿ ಶಾಸಕರಾರೂ ರಾಜೀನಾಮೆ ನೀಡಿಲ್ಲ. ಸರ್ಕಾರ ಸುಭದ್ರವಾಗಿದೆ’ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು 5 ವರ್ಷಕ್ಕಾಗಿ ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ. ಈಗ ಒಂದು ವರ್ಷ ಪೂರ್ಣಗೊಂಡಿದ್ದು, ಇನ್ನುಳಿದ ಕಾಲಾವಧಿಯನ್ನೂ ಸರ್ಕಾರ ಪೂರ್ಣಗೊಳಿಸಲಿದೆ. ಯಾವುದೇ ಆತಂಕ ಬೇಡ’ ಎಂದು ತಿಳಿಸಿದರು.

‘ಸರ್ಕಾರ ಉರುಳುತ್ತದೆ ಎಂದು ಹಲವರು ಹೇಳಿದ್ದರು. ದೀಪಾವಳಿ, ಯುಗಾದಿ, ಹುಣ್ಣಿಮೆ, ಅಮವಾಸ್ಯೆ, ಅಧಿವೇಶನ ಎಲ್ಲವೂ ಮುಗಿದು ಹೋದವು. ಸರ್ಕಾರಕ್ಕೆ ಏನೂ ಆಗಿಲ್ಲ’ ಎಂದು ವ್ಯಂಗ್ಯವಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು