ಶುಕ್ರವಾರ, ಆಗಸ್ಟ್ 19, 2022
27 °C

437 ಸ್ಥಾನಗಳಿಗೆ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ 7 ತಾಲ್ಲೂಕುಗಳಲ್ಲಿ ನಡೆಯುತ್ತಿದ್ದು, ಇಲ್ಲಿನ 437 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಮೂಡಲಗಿ, ಗೋಕಾಕ ಮತ್ತು ಕಿತ್ತೂರು ತಾಲ್ಲೂಕುಗಳ 259 ಪಂಚಾಯಿತಿಗಳ 4,259 ಸ್ಥಾನಗಳ ಪೈಕಿ 14 ಸ್ಥಾನಗಳು ಖಾಲಿ ಉಳಿದಿವೆ. 3,808 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 11,256 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

ಹುಕ್ಕೇರಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 104 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ನಂತರದ ಸ್ಥಾನದಲ್ಲಿ ಖಾನಾಪುರ 79, ಬೆಳಗಾವಿ 71, ಗೋಕಾಕ 68, ಬೈಲಹೊಂಗಲ 62, ಮೂಡಲಗಿ 44, ಕಿತ್ತೂರಲ್ಲಿ ಅತಿ ಕಡಿಮೆ ಅಂದರೆ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಬೆಳಗಾವಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಂದಿ ಅಂದರೆ 3,005 ಹಾಗೂ ಕಿತ್ತೂರಿನಲ್ಲಿ ಅತಿ ಕಡಿಮೆ ಅಂದರೆ 640 ಮಂದಿ ಕಣದಲ್ಲಿದ್ದಾರೆ. ಅಲ್ಲಿ ಗ್ರಾಮ ಪಂಚಾಯಿತಿಗಳ ಸಂಖ್ಯೆಯೂ ಕಡಿಮೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು