ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 7 ತಾಲ್ಲೂಕುಗಳಲ್ಲಿ ಮತದಾನ ಆರಂಭ

Last Updated 22 ಡಿಸೆಂಬರ್ 2020, 2:47 IST
ಅಕ್ಷರ ಗಾತ್ರ

ಬೆಳಗಾವಿ: ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಗೆ ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಮಂಗಳವಾರ ಮತದಾನ ಆರಂಭವಾಗಿದೆ.

ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ, ಮೂಡಲಗಿ ತಾಲ್ಲೂಕುಗಳ 259 ಗ್ರಾಮ ಪಂಚಾಯಿತಿಗಳ 3,808 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಸಂಜೆ ಐದರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

1894 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತದಾರರು ಸರದಿ ಸಾಲಿನಲ್ಲಿ ಬಂದು ಮತ ಹಕ್ಕು ಚಲಾಯಿಸುತ್ತಿದ್ದಾರೆ.

ಕಣದಲ್ಲಿರುವ ಅಭ್ಯರ್ಥಿಗಳು, ಕುಟುಂಬದವರು ಹಾಗೂ ಬೆಂಬಲಿಗರು ಮತದಾರರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತುಗಳನ್ನು ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಒಟ್ಟು 13.02 ಲಕ್ಷ ಮತದಾರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT