ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅದ್ದೂರಿ ಸ್ವಾಗತ

Published 28 ಮೇ 2023, 15:50 IST
Last Updated 28 ಮೇ 2023, 15:50 IST
ಅಕ್ಷರ ಗಾತ್ರ

ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ನಗರದಲ್ಲಿ ಭಾನುವಾರ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ತೆರೆದ ವಾಹನದಲ್ಲಿ ಇಬ್ಬರು ನಾಯಕರ ಮೆರವಣಿಗೆ ನಡೆಸಲಾಯಿತು.

ಇಲ್ಲಿನ ಕಾಂಗ್ರೆಸ್‌ ಭವನದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ, ಶ್ರೀಕೃಷ್ಣದೇವರಾಯ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ರಸ್ತೆ, ರಾಣಿ ಚನ್ನಮ್ಮನ ವೃತ್ತ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಬಸವೇಶ್ವರ ವೃತ್ತ ಮತ್ತಿತರ ಮಾರ್ಗಗಳಲ್ಲಿ ಸಂಚರಿಸಿತು.

ಅಂಬೇಡ್ಕರ್‌, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಂಭಾಜಿ ಮಹಾರಾಜರು, ಬಸವೇಶ್ವರ ಪುತ್ಥಳಿಗಳಿಗೆ ಇಬ್ಬರು ಸಚಿವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚನ್ನಮ್ಮನ ವೃತ್ತದಲ್ಲಿ ಬಣ್ಣ–ಬಣ್ಣದ ಚಿತ್ತಾರದ ಪಟಾಕಿಗಳನ್ನು ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಸತೀಶ ಮತ್ತು ಲಕ್ಷ್ಮಿ ಪರವಾಗಿ ಜೈಕಾರ ಕೂಗಿದರು.

ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸೀಫ್‌(ರಾಜು) ಸೇಠ್, ಮಹೇಂದ್ರ ತಮ್ಮಣ್ಣವರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್‌ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಸುನೀಲ ಹನುಮಣ್ಣವರ, ಶಾಮ್‌ ಘಾಟಗೆ, ಪ್ರದೀಪ್ ಎಂ.ಜೆ, ರಾಹುಲ್ ಜಾರಕಿಹೊಳಿ, ಮಹಾವೀರ ಮೋಹಿತೆ, ಪ್ರಭಾವತಿ ಚಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT