ಭಾನುವಾರ, ಅಕ್ಟೋಬರ್ 25, 2020
28 °C

ಉಚಗಾಂವ ದೇವಸ್ಥಾನ ನಿರ್ಮಾಣಕ್ಕೆ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಮಹಾದೇವ ಮಂದಿರದ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಮ್ಮ ನಿಧಿಯಿಂದ ₹ 10 ಲಕ್ಷ ಅನುದಾನ ನೀಡಿದ್ದಾರೆ.

ಈ ಪೈಕಿ ಮೊದಲ ಕಂತಿನಲ್ಲಿ ₹ 5.40 ಲಕ್ಷ ಚೆಕ್ ಅನ್ನು ಹೆಬ್ಬಾಳಕರ ದೇವಸ್ಥಾನ ಸಮಿತಿಯ ಮುಖಂಡರಿಗೆ ಹಸ್ತಾಂತರಿಸಿದರು.

‘ಗ್ರಾಮಸ್ಥರಿಗೆ ನೀಡಿದ್ದ ಭರವಸೆ ಈಡೇರಿಸಿದ್ದೇನೆ. ನಾನು ನೀಡಿದ ಯಾವ ಭರವಸೆಯೂ ಹುಸಿ ಆಗುವುದಿಲ್ಲ. ಜನರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದಾಗಿ  ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ಕೆಲಸ ಮುಂದುವರಿಸಿದ್ದೇನೆ’ ಎಂದು ತಿಳಿಸಿದರು.

ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು