ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಸುವರ್ಣ ವಿಧಾನಸೌಧಕ್ಕೆ ತೆರಳಿದರು.

ಕುವೆಂಪು ನಗರದಲ್ಲಿರುವ ಅವರ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವೆ ತೆರಳಿದರು.

ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, 'ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ ₹2000 ಹಣ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರಗಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಶುಲ್ಕ, ಮಕ್ಕಳಿಗೆ ಬೈಕ್ ಕೊಡಿಸಿರುವುದು.. ಹೀಗೆ ಅನೇಕ ರೂಪದಲ್ಲಿ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ' ಎಂದರು.

'ಮಹಿಳೆಯರ ಜೊತೆಗೆ ಲೈಂಗಿಕ ಅಲ್ಪಸಂಖ್ಯಾತರಿಗೂ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ' ಎಂದು ಹೇಳಿದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಫಲಾನುಭವಿಗಳು ಸಂವಾದ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ' ಎಂದರು.

ಸಚಿವರಿಗೆ ದೃಷ್ಟಿ ತೆಗೆದ ಲೈಂಗಿಕ ಅಲ್ಪಸಂಖ್ಯಾತರು: ಲೈಂಗಿಕ ಅಲ್ಪಸಂಖ್ಯಾತರು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು.

ನಿಮ್ಮಿಂದ ನಮಗೆ ಪ್ರತಿ ತಿಂಗಳು ₹2000 ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದರು.

ಹೊಸ ಬೈಕ್ ತೋರಿಸಿದ ಫಲಾನುಭವಿ: ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.