ಮೂಡಲಗಿ: ಇಲ್ಲಿನ ಬಸವೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಮಹೋತ್ಸವದ ಅಂಗವಾಗಿ ನಿರ್ಮಿಸಿರುವ ಅತಿಥಿ ಗೃಹ ಹಾಗೂ ವಾಹನ ನಿಲುಗಡೆ ಕಟ್ಟಡದ ಉದ್ಘಾಟನೆಯು ಆ.25ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಸೊಸೈಟಿ ಅಧ್ಯಕ್ಷ ಬಸವರಾಜ ತೇಲಿ ಮತ್ತು ಉಪಾಧ್ಯಕ್ಷ ಗಿರೀಶ ಢವಳೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.