ಭಾನುವಾರ, ಜನವರಿ 24, 2021
17 °C

ಗುರುನಾಥಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಗಡ್ಡಿ ಖಾನಾಪುರ: ಉಪ ವಲಯ ಅರಣ್ಯ ಅಧಿಕಾರಿಯಾಗಿರುವ ಹುಕ್ಕೇರಿ ತಾಲ್ಲೂಕು ಹೆಬ್ಬಾಳ ಗ್ರಾಮದವರಾದ ಗುರುನಾಥ ಮ. ಬಾಯನ್ನವರ ‘ಮುಖ್ಯಮಂತ್ರಿ ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ಈಚೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪದಕ ಪ್ರದಾನ ಮಾಡಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹೆಬ್ಬಾಳ ಮತ್ತು ಉನ್ನತ ಶಿಕ್ಷಣವನ್ನು ಸಂಕೇಶ್ವರದಲ್ಲಿ ಪಡೆದಿದ್ದಾರೆ. 1997ರಿಂದ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆಯಲ್ಲಿ ಗಡಿ ಗುರುತಿಸುವಿಕೆ ಅರಣ್ಯ ಸಮೀಕ್ಷೆ ಸೇರಿದಂತೆ ಹಲವು ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕೆ ಪುರಸ್ಕಾರ ಸಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.