ಸೋಮವಾರ, ಸೆಪ್ಟೆಂಬರ್ 27, 2021
21 °C

ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ತಿಮ್ಮಾಪುರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಅನುದಾನಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಡಾ.ಎಚ್.ಐ.
ತಿಮ್ಮಾಪುರ ಅವರನ್ನು ಆಯ್ಕೆ ಮಾಡಲಾಗಿದೆ.

ಇಲ್ಲಿನ ಅಂಜುಮನ್ ಮಹಾವಿದ್ಯಾಲಯದಲ್ಲಿ ಗ್ರೇಡ್-1 ಪ್ರಾಂಶುಪಾಲರಾಗಿ ತಿಮ್ಮಾಪುರ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಮತ್ತು ಅನೇಕ ಸಾಹಿತ್ಯಕ ಸಾಂಸ್ಕೃತಿಕ ಸಂಘಟನೆಗಳ
ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿರುವ ಅನುದಾನಿತ ಎಲ್ಲ ಪದವಿ ಮಹಾವಿದ್ಯಾಲಯಗಳು ಈ ಸಂಘಟನೆಯ ವ್ಯಾಪ್ತಿಯಲ್ಲಿ ಬರುತ್ತವೆ.

ಅಂಜುಮನ್ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ತಿಮ್ಮಾಪುರ ಅವರನ್ನು ಸನ್ಮಾನಿಸಿದರು. ಅಂಜುಮನ್ ಸಂಸ್ಥೆಯ ವ್ಯವಸ್ಥಾಪಕ ರಾಜು ಸೇಠ್‌, ಕಾರ್ಯದರ್ಶಿ ಸಮೀವುಲ್ಲಾ ಮಹಡಿವಾಲೆ ಅಭಿನಂದಿಸಿದ್ದಾರೆ. ಸಿಬ್ಬಂದಿ ಬಿ.ಟಿ. ಮುಗುಟ, ಎಂ.ಮಾಹಿನ್. ಎಸ್.ಎ. ಮುಲ್ಲಾ, ಐ.ಬಿ. ತಹಶೀಲ್ದಾರ್, ಎ.ಐ. ಸುತಾರ ಹಾಗೂ ಟಿ.ಎನ್. ಕೊತವಾಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.