ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂದಿಗುಂದ | ಪ್ರಜಾವಾಣಿ ವರದಿ ಪರಿಣಾಮ: ಹಳೆಯ ಶೌಚಗೃಹ ದುರಸ್ತಿ

Published 28 ಡಿಸೆಂಬರ್ 2023, 16:09 IST
Last Updated 28 ಡಿಸೆಂಬರ್ 2023, 16:09 IST
ಅಕ್ಷರ ಗಾತ್ರ

ಹಂದಿಗುಂದ: ಸಮೀಪದ ಪಾಲಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಸವರಾಜಪ್ಪ ಬುಧವಾರ ಭೇಟಿ ನೀಡಿ, ಅಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಮೂಲಸೌಕರ್ಯ ಕುರಿತು ಪರಿಶೀಲಿಸಿದರು.

‘ಗ್ರಾಮ ಪಂಚಾಯ್ತಿಯವರು ಶಾಲಾ ಆವರಣದಲ್ಲಿ ಈ ಹಿಂದೆ ನಿರ್ಮಿಸಿದ್ದ ಹಳೆಯ ಶೌಚಗೃಹ ದುರಸ್ತಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಹೈಟೆಕ್ ಶೌಚಗೃಹ ನಿರ್ಮಿಸಿ, ಅನುಕೂಲ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

‘ಹಳೆಯ ಶೌಚಗೃಹ ದುರಸ್ತಿಗೊಳಿಸಿದ್ದೇವೆ. ಹೊಸ ಶೌಚಗೃಹ ನಿರ್ಮಾಣವಾಗುವವರೆಗೂ ವಿದ್ಯಾರ್ಥಿನಿಯರಿಗೆ ಯಾವ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪಿಡಿಒ ಶ್ರೀಕಾಂತ ಪಾಟೀಲ ಹೇಳಿದರು.

ಶಿಕ್ಷಣ ಸಂಯೋಜಕರಾದ ಶ್ರೀಕಾಂತ ಕಂಬಾರ, ಹನುಮಂತ ಬೆನ್ನಾಡೆ, ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಗಸ್ತಿ ಇತರರಿದ್ದರು.

ಪಾಲಬಾವಿ ಶಾಲೆಯಲ್ಲಿ ಶೌಚಗೃಹ ಇಲ್ಲದ್ದರಿಂದ 217 ವಿದ್ಯಾರ್ಥಿನಿಯರು ಪರದಾಡುತ್ತಿರುವ ಕುರಿತು ‘ಪ್ರಜಾವಾಣಿ’ ಡಿ.24ರ ಸಂಚಿಕೆಯಲ್ಲಿ ‘ವಿದ್ಯಾರ್ಥಿನಿಯರ ಶೌಚಕ್ಕೆ ಬಯಲೇ ಗತಿ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT