ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಿದ್ದ ಜಾಗದಲ್ಲಿ ಹನುಮಾನ್‌ ಮೂರ್ತಿ! ಗೊಂದಲ

Last Updated 8 ಜೂನ್ 2022, 10:33 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಮಾಡಲು ನಿಗದಿ ಮಾಡಿದ ಸರ್ಕಲ್‌ನಲ್ಲಿ ಹನುಮಾನ್‌ ಮೂರ್ತಿ ನಿಲ್ಲಿಸಿದ್ದರಿಂದ, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಗ್ರಾಮದ ಮುಖ್ಯ ಸ್ಥಳದಲ್ಲಿ ರಾಮಲಿಂಗೇಶ್ವರ ದೇವಸ್ಥಾನದ ಎದುರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹಾಗೂ ವಾಲ್ಮೀಕಿ ಸೇನೆ ಮುಖಂಡರು ಸ್ಥಳೀಯ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರು. ಸ್ಥಳದಲ್ಲಿ ಕನ್ನಡದ ಧ್ವಜಗಳನ್ನೂ ನೆಟ್ಟಿದ್ದರು.

ಆದರೆ, ಮಂಗಳವಾರ ತಡರಾತ್ರಿ ಯಾರೋ ಈ ಜಾಗದಲ್ಲಿ ಮೂರಡಿ ಎತ್ತರದ ಆಂಜನೇಯನ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಇದರಿಂದ ಬುಧವಾರ ಬೆಳಿಗ್ಗೆಯಿಂದ ಗ್ರಾಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಜನರನ್ನ ಚದುರಿಸಿ ಪರಿಸ್ಥಿತಿ ನಿಭಾಯಿಸಿದರು.

ನಂತರ ಪೊಲೀಸ್‌ ಅಧಿಕಾರಿಗಳೇ ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ, ಸ್ಥಳದಿಂದ ತೆರವು ಮಾಡಿದರು. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್‌ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT