ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ವೇಳೆ ಟೋಪಿ ಹಾಕಿ, ಖಡ್ಗ ಹಿಡಿಯುತ್ತಾರೆ: ವ್ಯಂಗ್ಯ

Last Updated 10 ನವೆಂಬರ್ 2018, 12:50 IST
ಅಕ್ಷರ ಗಾತ್ರ

ಬೆಳಗಾವಿ: ಟಿಪ್ಪು ಜಯಂತಿ ವಿರೋಧಿಸುವ ರಾಜಕೀಯ ನಾಯಕರೇ ಚುನಾವಣೆ ವೇಳೆ ಟೋಪಿ ಹಾಕಿಕೊಂಡು, ಖಡ್ಗ ಹಿಡಿದು ಪೋಸ್‌ ಕೊಡುತ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯವಾಡಿದರು.

ನಗರದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಟಿಪ್ಪು ಸುಲ್ತಾನ್‌ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಟಿಪ್ಪು ಸೇರಿದಂತೆ ಎಲ್ಲ ಮಹಾನ್ ವ್ಯಕ್ತಿಗಳ ಜಯಂತಿ ಆಚರಿಸುತ್ತಿದೆ. ಆದರೆ, ಕೆಲವರು ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಮಹಾನ್ ವ್ಯಕ್ತಿಗಳನ್ನು ವಿರೋಧಿಸುವುದು, ನಿಂದಿಸುವುದು, ಅಪಪ್ರಚಾರ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಟಿಪ್ಪು ಕನ್ನಡ ವಿರೋಧಿಯಲ್ಲ:

ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ‘ಟಿಪ್ಪು ತಮ್ಮ ಆಡಳಿತದಲ್ಲಿ ಕನ್ನಡಕ್ಕೆ ಸಾಕಷ್ಟು ಪ್ರಾಶಸ್ತ್ಯ ನೀಡಿದ್ದರು. ಪರ್ಷಿಯನ್‌ ಭಾಷೆ ಹೇರಿದ್ದರೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಂಸದ ಎಚ್‌.ಡಿ. ದೇವೇಗೌಡ, ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಹಿಂದಿಯಲ್ಲಿ ಮಾತನಾಡುವುದನ್ನು ಕಲಿಯುತ್ತಿದ್ದರು. ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಂತೆ ಶಾಯರಿ ಕೂಡ ಹೇಳುತ್ತಿದ್ದರು’ ಎಂದು ನಗೆ ಚಟಾಕಿ ಹಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT