ಸೋಮವಾರ, ಮಾರ್ಚ್ 30, 2020
19 °C

ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವದತ್ತಿ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭಾನುವಾರ ಭೇಟಿ ನೀಡಿ, ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇದು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುಣ್ಯಕ್ಷೇತ್ರ. ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿ ದರ್ಶನಕ್ಕೆ ಬರುತ್ತಾರೆ. ಆದರೆ, ಕ್ಷೇತ್ರದಲ್ಲಿ ನೊಣ, ಸೊಳ್ಳೆಗಳ ಹಾವಳಿ ವಿಪರೀತವಾಗಿದೆ. ತ್ಯಾಜ್ಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ವಚ್ಛತೆಗೆ ಒತ್ತು ನೀಡಬೇಕು. ಇಂತಹ ಪವಿತ್ರ ಕ್ಷೇತ್ರ ಸ್ವಚ್ಛ ಮತ್ತು ಸುಂದರವಾಗಿರುವಂತೆ ನೋಡಿಕೊಳ್ಳಬೇಕು’ ಎಂದರು.

‘ಇಲ್ಲಿಗೆ ಬರುವ ಭಕ್ತರು ಅಡುಗೆ ಮಾಡಿಕೊಳ್ಳಲು ಕಟ್ಟಡ ನಿರ್ಮಿಸಬೇಕು. ದೇವಸ್ಥಾನದಲ್ಲಿ ಸಿಬ್ಬಂದಿ ಕೊರತೆ ನೀಗಿಸುವಂತೆ ಸರ್ಕಾರದ ಗಮನಸೆಳೆಯುತ್ತೇನೆ’ ಎಂದು ತಿಳಿಸಿದರು.

ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜೀರಗ್ಯಾಳ ಸತ್ಕರಿಸಿದರು. ಸಮಿತಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು