ಶುಕ್ರವಾರ, ಫೆಬ್ರವರಿ 28, 2020
19 °C

ಆಯುಷ್ಮಾನ್‌ ಭಾರತ: ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಇಲ್ಲಿನ ಜೆಎನ್‌ಎಂಸಿಯ ವಿ.ಡಿ. ಪಾಟೀಲ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಆರ್. ರಾಮಚಂದ್ರನ್‌ ಅಧ್ಯಕ್ಷತೆಯಲ್ಲಿ, ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಕುರಿತು ಚರ್ಚಿಸಲಾಯಿತು. ಉತ್ತಮ ಆರೋಗ್ಯ ಯೋಜನೆಯಾಗಿರುವ ಇದನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಸೂಚಿಸಲಾಯಿತು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲಾಯಿತು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ನಿರ್ದೇಶಕ ಡಾ.ಓಂಪ್ರಕಾಶ ಪಾಟೀಲ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ರಾಜ್ಯ ನೋಡಲ್ ಅಧಿಕಾರಿ ಡಾ.ಸುರೇಶ ಶಾಸ್ತ್ರಿ, ಉಪನಿರ್ದೇಶಕರಾದ ಡಾ.ರಾಜಕುಮಾರ್ ಎನ್., ಡಾ.ರಾಮಚಂದ್ರ ಬಾಯರಿ, ಡಾ.ಬಿ.ಆರ್. ರಜನಿ, ಪರಿಮಳಾ, ಡಾ.ಭಾನು ಮೂರ್ತಿ, ಡಾ.ವಿವೇಕ ದೊರೆ, ಬೆಳಗಾವಿ ವಿಭಾಗದ ಎಲ್ಲ ಏಳು ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಗೋಕಾಕ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ಉತ್ತಮ ಸಾಧನೆ ತೋರಿದ್ದರಿಂದ ಗೋಕಾಕ ಸಾರ್ವನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಅವರನ್ನು ಸತ್ಕರಿಸಲಾಯಿತು. ಉತ್ತಮ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ವಿಭಾಗೀಯ ಸಹ ನಿರ್ದೆಶಕ ಡಾ.ಅಪ್ಪಾಸಾಹೇಬ ಎಂ. ನರಟ್ಟಿ ಸ್ವಾಗತಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು