ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಪಿಎಚ್‌ಸಿಗಳಲ್ಲೂ 24x7 ಸೇವೆ: ಡಾ.ಕೆ. ಸುಧಾಕರ್

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ
Last Updated 21 ನವೆಂಬರ್ 2020, 21:13 IST
ಅಕ್ಷರ ಗಾತ್ರ

ಬೆಳಗಾವಿ: ‘ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಡಿ)ಗಳಲ್ಲೂ 24×7 ಸೇವೆ ದೊರೆಯುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ’ ಎಂದು ಆರೋಗ್ಯ ಮತ್ತು ‌ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಆಸ್ಪತ್ರೆಗಳಲ್ಲಿ, ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆಗಳನ್ನೂ ಸಂಪೂರ್ಣ ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ. ಸಿಟಿ ಸ್ಕ್ಯಾನ್, ರಕ್ತ ಪರೀಕ್ಷೆಗಳನ್ನೂ ಉಚಿತವಾಗಿ ಮಾಡಲಾಗುವುದು. ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಬೇಕಾಗುವ ಎಲ್ಲ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಯಾವುದೇ ಔಷಧಿ ಅಗತ್ಯವಿದ್ದರೂ ಪೂರೈಸುತ್ತಿದ್ದೇವೆ. ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಜನಸಂಖ್ಯೆ ಅಧರಿಸಿ ಹೆಚ್ಚುವರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭ ಹಾಗೂ ಆಂಬುಲೆನ್ಸ್‌ ಸೇವೆ ಬಲವರ್ಧನೆಗೆ ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದರು.

‘ಕೋವಿಡ್ ಸಂದರ್ಭದಲ್ಲಿ ಎದುರಾದ ಆಕ್ಸಿಜನ್ ಕೊರತೆ ಕಾರಣದಿಂದಾಗಿ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಮೆಡಿಕಲ್ ಆಕ್ಸಿಜನ್ ಘಟಕ ಆರಂಭಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ವೃದ್ಧಿಗೆ ಕೋವಿಡ್-19 ಕೂಡ ಪಾಠ ಕಲಿಸಿದಂತಾಗಿದೆ’ ಎಂದರು.

‘ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಮುಂಬರುವ ದಿನಗಳಲ್ಲಿ ವಿಲೀನಗೊಳಿಸಿ ಒಂದೇ ಇಲಾಖೆ ರೂಪಿಸುವ ಚಿಂತನೆ ಇದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT