ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಸಾಧ್ಯ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅಭಿಮತ

7

ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಸಾಧ್ಯ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅಭಿಮತ

Published:
Updated:
Deccan Herald

ಬೆಳಗಾವಿ: ಉತ್ತಮ ಸಮಾಜ ನಿರ್ಮಾಣ ಮಾಡುವುದು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಗ್ರಾಮೀಣ ಬಿಇಒ ಕಚೇರಿಯಿಂದ ರಾಮನಗರದ ಧರ್ಮನಾಥ ಭವನದಲ್ಲಿ ಗುರುವಾರ ಆಯೋಜಿಸಿದ್ದ ತಾಲ್ಲೂಕುಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಶಿಕ್ಷಕರ ಪಾತ್ರ ತಂದೆ–ತಾಯಿಗಿಂತ ಮಿಗಿಲಾದುದು. ಒಬ್ಬ ವ್ಯಕ್ತಿ ಉನ್ನತ ಸ್ಥಾನ ಅಲಂಕರಿಸಬೇಕಾದರೆ ಅದಕ್ಕೆ ಗುರುವಿನ ಮಾರ್ಗದರ್ಶನ ಮತ್ತು ಆಶೀರ್ವಾದ ಬೇಕಾಗುತ್ತದೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ನಾಗನೂರ ರುದ್ರಾಕ್ಷಿಮಠದ ಸಿದ್ಧರಾಮ ಸ್ವಾಮೀಜಿ, ‘ಶಿಕ್ಷಕರು ರಾಷ್ಟ್ರ ನಿರ್ಮಾಣ ಮಾಡುವ ವ್ಯಕ್ತಿಗಳು. ಅವರನ್ನು ಮರೆಯಬಾರದು; ಗೌರವಿಸಬೇಕು’ ಎಂದು ತಿಳಿಸಿದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ‘ಸಮಾಜದಲ್ಲಿ ಧನಾತ್ಮಕ ಬದಲಾವಣೆ ಆಗಬೇಕಾದರೆ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ. ಶಿಕ್ಷಕರಿಗೆ ಸಿಗುವ ಗೌರವ ಯಾರಿಗೂ ಇಲ್ಲ’ ಎಂದು ಅಭಿಪ್ರಾಯಪಟ್ಟರು.

ವಿಶೇಷ ಉಪನ್ಯಾಸ ನೀಡಿದ ಪ್ರಾಚಾರ್ಯ ವೈ.ಎಂ. ಯಾಕೊಳ್ಳಿ, ‘ದೇಶದ ಭವಿಷ್ಯ ತರಗತಿ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ. ಶಿಕ್ಷಕರು ದೇಶಕ್ಕೆ ಅವಶ್ಯವಿರುವ ಮಾನವೀಯತೆ ಹೊಂದಿದ ಪ್ರಜೆಗಳನ್ನು ರೂಪಿಸಬೇಕು’ ಎಂದು ಸಲಹೆ ನೀಡಿದರು.

ಎಸ್‌ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮಕ್ಕಳಿಗೆ ಇಲಾಖೆ ವತಿಯಿಂದ ಲ್ಯಾಪ್‌ಟಾಪ್‌ ವಿತರಿಸಲಾಯಿತು. ನಿವೃತ್ತ ಶಿಕ್ಷಕರು, ಕಾರ್ಯಕ್ರಮಕ್ಕೆ ದೇಣಿಗೆ ನೀಡಿದ ದಾನಿಗಳು, ಸಾಧಕ ಶಿಕ್ಷಕರನ್ನು ಸತ್ಕರಿಸಲಾಯಿತು.

ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಗೋರಲ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸದಸ್ಯರು, ಅಧಿಕಾರಿಗಳು, ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಮತ್ತು ಶಿಕ್ಷಕರು ಇದ್ದರು.

ಗಜಾನನ ಪ್ರಾರ್ಥನಾ ನೃತ್ಯ ಪ್ರಸ್ತುತಪಡಿಸಿದರು. ಬಿಇಒ ಲೀಲಾವತಿ ಹಿರೇಮಠ ಸ್ವಾಗತಿಸಿದರು. ರಮೇಶ ಗೋಣಿ ನಿರೂಪಿಸಿದರು. ರಾಜಶೇಖರ ನೇಗಿನಹಾಳ ವಂದಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !