ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

Published 18 ಜುಲೈ 2023, 11:20 IST
Last Updated 18 ಜುಲೈ 2023, 11:20 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುಪಾಲು ಕಡೆ ಮಂಗಳವಾರ ಬೆಳಿಗ್ಗೆಯಿಂದ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನದ ನಂತರ ತುಸು ಬಿರುಸು ಪಡೆಯಿತು.

ಬೆಳಗಾವಿ ನಗರ ಹಾಗೂ ತಾಲ್ಲೂಕು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಚನ್ನಮ್ಮನ ಕಿತ್ತೂರು, ಹುಕ್ಕೇರಿ, ಖಾನಾಪುರ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ ಹಾಗೂ ಗೋಕಾಕ ತಾಲ್ಲೂಕಿನ ಎಲ್ಲ ಕಡೆಗಳಲ್ಲೂ ಉತ್ತಮ ಮಳೆ ಸುರಿಯಿತು.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ಜಿಲ್ಲೆಯಲ್ಲಿ ಘಟಪ್ರಭಾ ನದಿ ನೀರಿನ ಹರಿವು ಹೆಚ್ಚಿದೆ. ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ಒಳಹರಿವಿನ ಪ್ರಮಾಣ 5,044 ಕ್ಯುಸೆಕ್‌ನಿಂದ 8,997 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಮನೆಗಳಿಗೆ ನುಗ್ಗಿದ ನೀರು: ಬೆಳಗಾವಿ ನಗರ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ದಟ್ಟ ಮೋಡ ಕವಿದ ವಾತಾವರಣವಿತ್ತು. ಬೆಳಿಗ್ಗೆ 9ಕ್ಕೆ ಆರಂಭವಾದ ಮಳೆ ಸಂಜೆಯರೆಗೂ ಮುಂದುವರಿಯಿತು. ಜಾಧವ ನಗರ, ಶಾಹೂನಗರ, ನೆಹರೂ ನಗರ, ಗ್ಯಾಂಗ್‌ವಾಡ, ಶಿವಬಸವ ನಗರದ ತಗ್ಗು ಪ್ರದೇಶದಲ್ಲಿ ಮನೆಗಳ ಮುಂದೆ ನೀರು ಸಂಗ್ರಹಗೊಂಡಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT