ಗುರುವಾರ , ಮಾರ್ಚ್ 4, 2021
26 °C

ಬೆಳಗಾವಿ: ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸಮತೋಲನವನ್ನು ಕಾಪಾಡುವ ದೃಷ್ಟಿಯಿಂದ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.

ಹಿಡಕಲ್‌ ಬಳಿ ಇರುವ ಘಟಪ್ರಭಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಕಳೆದ 24 ತಾಸುಗಳಲ್ಲಿ 61,800 ಕ್ಯುಸೆಕ್‌ ನೀರು ಹರಿದುಬಂದಿದೆ. ಪ್ರಸಕ್ತ ವರ್ಷದಲ್ಲಿ ಇದು ಗರಿಷ್ಠ ಪ್ರಮಾಣವಾಗಿದೆ. 2175 ಅಡಿ ಎತ್ತರದ ಜಲಾಶಯದಲ್ಲಿ 2171.58 ಅಡಿಗಳವರೆಗೆ ನೀರು ಸಂಗ್ರಹವಾಗಿದೆ. 46.33 ಟಿಎಂಸಿ ಅಡಿ (ಗರಿಷ್ಠ 51 ಟಿಎಂಸಿ ಅಡಿ) ಸಂಗ್ರಹವಾಗಿದೆ. ಮಂಗಳವಾರ 29,429 ಕ್ಯುಸೆಕ್ ನೀರು ಹೊರಬಿಡಲಾಗಿದೆ.

ಮಲಪ್ರಭಾ ಉಗಮ ಸ್ಥಳ ಖಾನಾಪುರ ತಾಲ್ಲೂಕಿನ ಕಣಕುಂಬಿ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಸವದತ್ತಿ ಬಳಿಯಿರುವ ನವಿಲುತೀರ್ಥ ಜಲಾಶಯಕ್ಕೆ 24 ತಾಸುಗಳ ಅವಧಿಯಲ್ಲಿ 39,992 ಕ್ಯುಸೆಕ್‌ ನೀರು ಹರಿದುಬಂದಿದೆ. 2079.50 ಅಡಿ ಎತ್ತರದ ಜಲಾಶಯದಲ್ಲಿ 2073.90 ಅಡಿಗಳವರೆಗೆ ನೀರು ಸಂಗ್ರಹವಾಗಿದೆ. 37 ಟಿಎಂಸಿ ಅಡಿ ಪೈಕಿ ಈಗಾಗಲೇ 30.32 ಟಿಎಂಸಿ ಅಡಿ ಸಂಗ್ರಹವಾಗಿದೆ. 1,164 ಕ್ಯುಸೆಕ್‌ ನೀರು ಹೊರಬಿಡಲಾಗಿದೆ.

‘ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ನದಿಪಾತ್ರಗಳಲ್ಲಿರುವ ಜನರು ಸುರಕ್ಷಿತ ಸ್ಥಳಗಳತ್ತ ತೆರಳಬೇಕು’ ಎಂದು ಜಲಾಶಯದ ಅಧಿಕಾರಿಗಳು ಕೋರಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು