ಬುಧವಾರ, ಸೆಪ್ಟೆಂಬರ್ 30, 2020
21 °C

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. 

ಚಿಕ್ಕೋಡಿ, ಬೆಳಗಾವಿ, ರಾಮದುರ್ಗ, ಬೈಲಹೊಂಗಲ, ಕೌಜಲಗಿ, ಹಿರೇಬಾಗೇವಾಡಿ, ಸಾಂಬ್ರಾ, ಗೋಕಾಕ, ಅಥಣಿ, ಹಾರೂಗೇರಿ, ಸವದತ್ತಿ, ಯಮಕನಮರಡಿಯಲ್ಲಿ ನಿರಂತರ ಮಳೆಯಾಗುತ್ತಿದೆ. 

ನಿರಂತರ ಮಳೆಯಿಂದಾಗಿ ಬೆಳಗಾವಿಯ ಎಪಿಎಂಸಿ ಗೋಡೆ ಶಿಥಿಲಗೊಂಡು, ನೆಲಕ್ಕುರುಳಿದೆ. ರಸ್ತೆಯ ಮೇಲೆಯೇ ದೊಡ್ಡ ದೊಡ್ಡ ಕಲ್ಲುಗಳು ಉರುಳಿ ಬಿದ್ದಿರುವುದರಿಂದ ಜ್ಯೋತಿ ನಗರ ಕಡೆ ಹೋಗುವ ಮಾರ್ಗ ಬಂದ್ ಆಗಿದೆ.

ಬೆಳಗಾವಿ ತಾಲ್ಲೂಕಿನ ಕಡೋಲಿ- ದೇವಗಿರಿ ರಸ್ತೆಯ ಮೇಲೆ ಒಂದರಿಂದ ಎರಡು ಅಡಿಗಳಷ್ಟು ನೀರು ಹರಿಯುತ್ತಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು