ಚಿಕ್ಕೋಡಿ: ಕೃಷ್ಣಾ ನದಿ ಒಳ ಹರಿವು ಏರಿಕೆ

ಚಿಕ್ಕೋಡಿ: ಮಹಾರಾಷ್ಟ್ರದ ಸಹ್ಯಾದ್ರಿ ಪರ್ವತ ಶ್ರೇಣಿ ಮತ್ತು ತಾಲ್ಲೂಕಿನ ನದಿಗಳ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ತಾಲ್ಲೂಕಿನಲ್ಲಿ ಕೃಷ್ಣಾ ನದಿ ಒಳಹರಿವು 77 ಸಾವಿರ ಕ್ಯುಸೆಕ್‌ಗೆ ಏರಿಕೆಯಾಗಿದೆ.
ದೂಧ್‌ಗಂಗಾ ನದಿಯಿಂದ 19,768 ಕ್ಯುಸೆಕ್ ಮತ್ತು ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 58 ಸಾವಿರ ಕ್ಯುಸೆಕ್ ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಒಟ್ಟು 77, 768 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೃಷ್ಣಾ ನದಿ ಒಳಹರಿವಿನಲ್ಲಿ 15 ಸಾವಿರ ಕ್ಯುಸೆಕ್‌ನಷ್ಟು ಹೆಚ್ಚಳವಾಗಿದೆ.
ಕೃಷ್ಣಾ ನದಿಗೆ ಅಡ್ಡಲಾಗಿರುವ ತಾಲ್ಲೂಕಿನ ಕಲ್ಲೋಳ- ಯಡೂರ, ಮಾಂಜರಿ-ಬಾವಾನ ಸೌಂದತ್ತಿ, ದೂಧ್‌ಗಂಗಾ ನದಿಗೆ ಅಡ್ಡಲಾಗಿರುವ ಮಲಿಕವಾಡ- ದತ್ತವಾಡ ಹಾಗೂ ನಿಪ್ಪಾಣಿ ತಾಲ್ಲೂಕಿನಲ್ಲಿ ದೂಧ್‌ಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ- ಭೋಜ್, ವೇದಗಂಗಾ ನದಿಗೆ ಅಡ್ಡಲಾಗಿರುವ ಕೊಡ್ನಿ-ಬೂದಿಹಾಳ, ಮಾಂಗೂರ-ಕುನ್ನೂರ, ಬಾರವಾಡ-ಕುನ್ನೂರ, ಭೋಜ್ವಾಡಿ- ಶಿವಾಪುರವಾಡಿ, ಜತ್ರಾಟ- ಭೀವಶಿ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತ ಸ್ಥಿತಿಯಲ್ಲಿಯೇ ಇವೆ. ಗುರುವಾರ ಅಕ್ಕೋಳ- ಸಿದ್ನಾಳ ಕಿರು ಸೇತುವೆಯೂ ಜಲಾವೃತಗೊಂಡಿದೆ. ವಾಹನ ಮತ್ತು ಜನಸಂಚಾರಕ್ಕೆ ಪರ್ಯಾಯ ಮಾರ್ಗಗಳಿವೆ.
ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ 42 ಸೆ.ಮೀ., ಕೊಯ್ನಾದಲ್ಲಿ 34 ಸೆ.ಮೀ., ನವಜಾದಲ್ಲಿ 42 ಸೆ.ಮೀ., ವಾರಣಾ ಮತ್ತು ಪಾಟಗಾಂವದಲ್ಲಿ ತಲಾ 18 ಸೆ.ಮೀ., ರಾಧಾನಗರಿಯಲ್ಲಿ 19 ಸೆ.ಮೀ., ಕೊಲ್ಹಾಪುರದಲ್ಲಿ 10 ಸೆ.ಮೀ. ಮಳೆಯಾಗಿದ್ದು, ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಗುರುವಾರ ಸುಮಾರು 4 ಅಡಿಯಷ್ಟು ಏರಿಕೆ ಕಂಡು ಬಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.