ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಡಕಲ್‌ ಜಲಾಶಯ: ಎರಡೇ ದಿನಗಳಲ್ಲಿ ನೀರು ಐದೂವರೆ ಅಡಿ ಏರಿಕೆ

Published 11 ಜುಲೈ 2023, 8:53 IST
Last Updated 11 ಜುಲೈ 2023, 8:53 IST
ಅಕ್ಷರ ಗಾತ್ರ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಉತ್ತಮ ಮಳೆ ಮುಂದುವರಿದಿದ್ದು, ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ಇದರಿಂದಾಗಿ ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದಲ್ಲಿ ಕಳೆದ ಎರಡೇ ದಿನಗಳಲ್ಲಿ ನೀರಿನ ಸಂಗ್ರಹ ಮಟ್ಟ ಐದೂವರೆ ಅಡಿ ಏರಿಕೆಯಾಗಿದೆ.

2,175 ಅಡಿ ಗರಿಷ್ಠ ಸಾಮರ್ಥ್ಯದ ಹಿಡಕಲ್‌ ಜಲಾಶಯದಲ್ಲಿ ಜುಲೈ 9ರಂದು 2070.60 ಅಡಿ ನೀರು ಸಂಗ್ರಹವಿತ್ತು. ಜುಲೈ 11ರಂದು ಅದು 2085.03 ಅಡಿಗೆ ಏರಿಕೆಯಾಗಿದೆ. ಸೋಮವಾರ ಒಳಹರಿವಿನ ಪ್ರಮಾಣ 6,097 ಕ್ಯುಸೆಕ್‌ ಇತ್ತು. ಮಂಗಳವಾರ ಅದು 6,905 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಜಲಾಶಯದಲ್ಲಿ ಒಳಹರಿವು ಕ್ರಮೇಣವಾಗಿ ಹೆಚ್ಚುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಜನರು ತುಸು ನಿರಾಳವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT