ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ | ಅತಿವೃಷ್ಠಿ: ಮುನ್ನೆಚ್ಚರಿಕೆ ವಹಿಸಲು ಪಿಡಿಒಗಳಿಗೆ ಸೂಚನೆ

Published 1 ಜೂನ್ 2024, 15:11 IST
Last Updated 1 ಜೂನ್ 2024, 15:11 IST
ಅಕ್ಷರ ಗಾತ್ರ

ಚಿಕ್ಕೋಡಿ: ಮಳೆಗಾಲ ಪ್ರಾರಂಭಕ್ಕೂ ಮುಂಚೆ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ತಂಡ ರಚಿಸಿ, ಅತಿವೃಷ್ಠಿ ಮುನ್ನೆಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ವಿಪತ್ತು ನಿರ್ವಹಣಾ ತಂಡ ರಚನೆ ಮಾಡಬೇಕೆಂದು ಚಿಕ್ಕೋಡಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಯ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಎದುರಾಗುವ ಸಮಸ್ಯೆ ನಿರ್ವಹಣೆಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ವಸತಿ ವ್ಯವಸ್ಥೆ ಊಟೋಪಹಾರಕ್ಕಾಗಿ ಕಾಳಜಿ ಕೇಂದ್ರ ಸ್ಥಾಪಿಸಬೇಕಾಗುತ್ತದೆ. ನದಿ ತೀರದ ಗ್ರಾಮ ಪಂಚಾಯಿತಿಗಳು ಸೂಕ್ತ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಸಹಾಯಕ ನಿರ್ದೇಶಕ (ಗ್ರಾಉ) ಶಿವಾನಂದ ಶಿರಗಾಂವಿ ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೂಲಿ ಕೆಲಸ ಬೇಡಿಕೆ ಸಲ್ಲಿಸಿದವರಿಗೆ ಕಡ್ಡಾಯವಾಗಿ ಕೆಲಸ ನೀಡಬೇಕು. ನಿರಾಕರಿಸಿದರೆ ಅವರ ಮೇಲೆ ಕ್ರಮ ಕೈಗೊಳಲಾಗುವುದು ಎಂದು ಹೇಳಿದರು.

2023-2024ನೇ ಸಾಲಿನ ಗ್ರಾಮ ಪಂಚಾಯಿತಿ ಯೋಜನೆಗಳನ್ನು ಪ್ರಗತಿ ಸಾಧನೆ ಮಾಡಿದ ಅಭಿವೃದ್ಧಿ ಅಧಿಕಾರಿಗಳಿಗೆ ಅಭಿನಂಧನಾ ಪತ್ರ ನೀಡಿ ಗೌವರಿಸಲಾಯಿತು. ನಿವೃತ್ತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಲಗೌಡಾ ಸಾತಗೌಡನವರ, ಪ್ರಕಾಶ ಪಾಟೀಲ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ಎಸ್.ಎಸ್.ಮಠದ, ಉದಯಗೌಡ ಪಾಟೀಲ, ಮೆಹಬೂಬ ಕೋತ್ವಾಲ್, ರಂಜಿತ ಕಾರ್ಣಿಕ , ಅಕ್ಷಯ ಟಕ್ಕನವರ, ಚೇತನ ಶಿರಹಟ್ಟಿ, ಬಸವರಾಜ ದೊಡ್ಡನಿಂಗಪ್ಪಗೋಳ, ಮಂಜು ಎಚ್. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT