ಸೋಮವಾರ, ಜೂನ್ 14, 2021
21 °C

ಜೋರು ಗಾಳಿ-ಮಳೆ: ತಗಡಿನ ಶೀಟು ಹಾರಿ ಹೋಗಿ ತೀವ್ರ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಳಗಾವಿ: ಜೋರು ಗಾಳಿ-ಮಳೆಯಿಂದಾಗಿ ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮದ ಸರ್ಕಾರಿ ಶಾಲೆಯ ಚಾವಣಿ ಹಾರಿ ಹೋಗಿದೆ.

ಗ್ರಾಮದ ಕೆಲವು ಮನೆಗಳ ಹೆಂಚುಗಳು ಮತ್ತು ತಗಡಿನ ಶೀಟುಗಳು ಹಾರಿ ಹೋಗಿ ತೀವ್ರ ಹಾನಿ ಸಂಭವಿಸಿದೆ.

ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗಿದೆ. ವಿದ್ಯುತ್ ತಂತಿಗಳು ಒಂದಕ್ಕೊಂದು ಸಿಲುಕಿಕೊಂಡಿರುವ ಪರಿಣಾಮವಾಗಿ, ಈ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಇಲ್ಲವಾಗಿದೆ.

ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೆಸ್ಕಾಂನವರು ಆದಷ್ಟು ಬೇಗ ವಿದ್ಯುತ್ ಮಾರ್ಗ ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು