ಬೆಳಗಾವಿ: ‘ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಯಾವುದೇ ಇಲಾಖೆ ಅಧಿಕಾರಿಗಳ ಸಭೆ ನಡೆಸಿಲ್ಲ. ನಮ್ಮನ್ನೆಲ್ಲ ಕರೆದು ಚರ್ಚಿಸಿದ್ದಾರೆ. ಇದಕ್ಕೆ ಸಚಿವರ ಮೌಲ್ಯಮಾಪನ ಎನ್ನಲಾಗದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪರವಾಗಿ ನೀವೇನು ಕಾಳಜಿ ತೋರಿದ್ದೀರಿ? ಅನುದಾನದ ಬಳಕೆ, ಅಭಿವೃದ್ಧಿ ಕೆಲಸ ಹೇಗೆ ನಡೆಯುತ್ತಿವೆ ಎಂದೆಲ್ಲ ಸುರ್ಜೇವಾಲಾ ಕೇಳಿದ್ದಾರೆ. ಇದು ಮೂರು ತಿಂಗಳಿಗೊಮ್ಮೆ ನಡೆಯುವ ರೂಟಿನ್ ಕೆಲಸ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದರು.

‘ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ’ ಎಂಬ ಸಚಿವ ರಾಜಣ್ಣ ಹೇಳಿಕೆಗೆ, ‘ನಮ್ಮದು ಹೈಕಮಾಂಡ್ ಹೇಳಿದಂತೆ ನಡೆಯುವ ಪಕ್ಷ. ಈ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ’ ಎಂದು ಹೇಳಿದರು.

‘ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ನಾವು ಕುಡಿಯುವ ನೀರಿಗಾಗಿ ನೀರು ಕೇಳುತ್ತಿದ್ದೇವೆಯೇ ಹೊರತು, ನೀರಾವರಿಗಾಗಿ ಅಲ್ಲ. ಈ ಯೋಜನೆಗೆ ಕೇಂದ್ರ ಅನುಮತಿ ಕೊಟ್ಟಿದೆ. ಗೋವಾ ಸರ್ಕಾರವೂ ಒಪ್ಪಿದೆ ಎಂದು ಬಿಜೆಪಿಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಹೇಳಿ ಸಿಹಿ ಹಂಚಿದರು. ಈ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಮಾಡಿಕೊಂಡರು. ಈಗ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ’ ಎಂದರು.

‘ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ರಾಜಕಾರಣ ಮಾಡುತ್ತಿದೆ’ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿಕೆಗೆ, ‘ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣದ ವಿಚಾರದಲ್ಲಿ ರಾಜಕೀಯ ಮಾಡುವ ಅನಿವಾರ್ಯತೆ ಕಾಂಗ್ರೆಸ್ಗೆ ಇಲ್ಲ’ ಎಂದು ಉತ್ತರಿಸಿದರು.

ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಹೆಬ್ಬಾಳಕರ, ‘ಕರ್ನಾಟಕ ಅಥವಾ ಗೋವಾ ಭಾರತದ ಅವಿಭಾಜ್ಯ ಅಂಗಗಳು. ಗೋವಾದಿಂದ ಚಿಕಿತ್ಸೆ, ವ್ಯವಹಾರಕ್ಕಾಗಿ ಅನೇಕರು ಕರ್ನಾಟಕಕ್ಕೆ ಬರುತ್ತಾರೆ. ಕರ್ನಾಟಕದವರು ಅಲ್ಲಿಗೆ ಹೋಗುತ್ತಾರೆ. ಗೋವಾ ರಾಜ್ಯಕ್ಕೆ ಬೇರೆ ರಾಜ್ಯದವರು ಹೋಗದಿದ್ದರೆ ಪ್ರವಾಸೋದ್ಯಮ ಬೆಳೆಯದು. ಕನ್ನಡಿಗರ ಮೇಲೆ ಹಲ್ಲೆ ಮಾಡುವುದು ತಪ್ಪು. ಅಲ್ಲಿನ ಸರ್ಕಾರ ಮಧ್ಯಸ್ಥಿಕೆ ವಹಿಸಿ ಇದನ್ನು ಸರಿಪಡಿಸಬೇಕೇ ಹೊರತು, ಮೌನ ವಹಿಸಬಾರದು. ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಗಮನಕ್ಕೆ ಈ ವಿಷಯ ತರುತ್ತೇನೆ’ ಎಂದರು.

‘ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ’ ಎಂಬ ಪ್ರಶ್ನೆಗೆ, ‘ರಾಜ್ಯದಲ್ಲಿ ಅಪೆಕ್ಸ್ ಬ್ಯಾಂಕ್ ಬಿಟ್ಟರೆ, ಡಿಸಿಸಿ ಬ್ಯಾಂಕ್ ದೊಡ್ಡದು. ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರ ನಾಯಕರೊಂದಿಗೆ ಚರ್ಚಿಸಿ, ಚುನಾವಣೆ ವಿಷಯವಾಗಿ ಹೆಜ್ಜೆ ಇರಿಸುತ್ತೇವೆ. ರೈತರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ’ ಎಂದರು.

‘ಐರಾ ಪ್ರೊಡಕ್ಷನ್ ವರ್ಕ್ಸ್ನಡಿ ಗೋಲ್ಡನ್ ಸ್ಟಾರ್ ಗಣೇಶ ಮತ್ತು ಡಾಲಿ ಧನಂಜಯ ನಾಯಕತ್ವದಲ್ಲಿ ಎರಡು ಚಲನಚಿತ್ರ ನಿರ್ಮಿಸುತ್ತಿದ್ದೇವೆ. ಈ ಸಿನಿಮಾಗಳಿಂದ ಉತ್ತರ ಕರ್ನಾಟಕವಷ್ಟೇ ಅಲ್ಲ; ಇಡೀ ಕರ್ನಾಟಕದ ಕಲಾವಿದರಿಗೆ ಅವಕಾಶ ಸಿಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.