ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೆಟ್ಟರ್‌ಗೆ ಅಧಿಕಾರದ ಮೋಹ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

Published 14 ಏಪ್ರಿಲ್ 2024, 16:18 IST
Last Updated 14 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ಬೈಲಹೊಂಗಲ: ‘ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಅಧಿಕಾರದ ಮೋಹವಿದೆ. ಮುಖ್ಯಮಂತ್ರಿ ಆದ ಮೇಲೂ ಮತ್ತೊಬ್ಬ ಮುಖ್ಯಮಂತ್ರಿಯ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದಾರೆ. ಇದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಮೊದಲು. ಇಂಥ ಸಮಯ ಸಾಧಕ ರಾಜಕಾರಣಿಯನ್ನು ಬೆಳಗಾವಿಯಿಂದ ದೂರ ಇಡಬೇಕು’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬುಡರಕಟ್ಟಿ, ಗೋವನಕೊಪ್ಪ, ದೊಡವಾಡ ಹಾಗೂ ಕರೀಕಟ್ಟಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಅವರು  ಮತಯಾಚಿಸಿದರು.

‘ಒಂದೆರಡು, ಸೋಫಾ, ಕುರ್ಚಿ, ಮೇಜುಗಳನ್ನು ಬಾಡಿಗೆ ಮನೆಗೆ ತಂದಿಟ್ಟು, ಇಲ್ಲೇ ಮನೆ ಮಾಡಿರುವೆ ಎಂದು ಶೆಟ್ಟರ್ ಹೊಸ ನಾಟಕ ಶುರು ಮಾಡಿದ್ದಾರೆ. ವ್ಯವಹಾರಿಕವಾಗಿ ಸಂಪೂರ್ಣ ಹುಬ್ಬಳ್ಳಿಯವರಾದ ಬೆಳಗಾವಿ ಜನ ಒಪ್ಪಿಕೊಳ್ಳುವುದಿಲ್ಲ. ಕ್ಷೇತ್ರದೊಂದಿಗೆ ಭಾವನಾತ್ಮಕ ನಂಟು ಇಟ್ಟಿಕೊಂಡರಷ್ಟೇ ಜನರ ಮನಸ್ಸು ಗೆಲ್ಲಲು ಸಾಧ್ಯ’ ಎಂದರು.

ಮೃಣಾಲ್‌ ಹೆಬ್ಬಾಳ್ಕರ್ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

‘ನನಗೆ ಸಂಸದೆ ಆಗಬೇಕು ಎಂಬ ಕನಸಿತ್ತು. ಆದರೆ ಸಾಧ್ಯವಾಗಲಿಲ್ಲ. ಇದೀಗ ನನ್ನ ಮಗನ ಮೂಲಕ ಆ ಕನಸನ್ನು ನೀವೆಲ್ಲರೂ ಈಡೇರಿಸಬೇಕು. ಮೃಣಾಲ್‌ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮಾತನಾಡಿ, ‘ಕಳೆದ 20 ವರ್ಷಗಳಿಂದ ಬಿಜೆಪಿ‌ ಸಂಸದರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಭಿವೃದ್ಧಿ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಬೆಳಗಾವಿಯ ಮಗನಾದ ನಾನು ನಿಮ್ಮೆಲ್ಲರ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡುವೆ. ಜಿಲ್ಲೆಗೆ ಬರಬೇಕಾದ ಅನುದಾನ, ಯೋಜನೆಗಳನ್ನು‌ ತರುವೆ’ ಎಂದರು.

ಶಾಸಕ ಮಹಾಂತೇಶ್ ಕೌಜಲಗಿ ಮಾತನಾಡಿ, ‘ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಗ್ಯಾರಂಟಿ. ಬೈಲಹೊಂಗಲ ಕ್ಷೇತ್ರದಲ್ಲಿ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಅತ್ಯಧಿಕ ಮತಗಳಿಂದ ಮುನ್ನಡೆ ಸಾಧಿಸುವರು’ ಎಂದರು.

ಶಿವರುದ್ರಪ್ಪ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಕಾರ್ತಿಕ ಪಾಟೀಲ, ಮಹಾಂತೇಶ ವಡ್ಡಿಕೊಪ್ಪ, ವಿಠ್ಠಲ ಕಾಳಿ, ಶ್ರೀಶೈಲ ವಾಲಿ, ಈರಪ್ಪ ಹತ್ತಿಗಟಗಿ, ಮಹಾದೇವಿ ಬೋಡಕಿ, ಜಾನವ್ವ ಬಾವನವರ್, ಬಸನಗೌಡ ಪಾಟೀಲ, ವೀರಭದ್ರ ಡೊಂಬರಕೊಪ್ಪ‌ ಇತರರು ಇದ್ದರು.

ಬೈಲಹೊಂಗಲ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಮುಖಂಡರು ಪ್ರಚಾರ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT