ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಹೆಬ್ಬಾಳಕರಗೆ ಸಮನ್ಸ್‌

Published 28 ಮಾರ್ಚ್ 2024, 14:04 IST
Last Updated 28 ಮಾರ್ಚ್ 2024, 14:04 IST
ಅಕ್ಷರ ಗಾತ್ರ

ಬೆಳಗಾವಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಐಪಿಸಿ ಕಲಂ 188ರ ಅಡಿ ಸಮನ್ಸ್‌ ಜಾರಿ ಮಾಡಿದೆ.

ಮಾರ್ಚ್‌ 20ರಂದು ಲಕ್ಷ್ಮಿ ಹೆಬ್ಬಾಳಕರ ಅವರು ತಮ್ಮ ಗೃಹಕಚೇರಿಯ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆತರ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿಲ್ಲ. ನೂರಾರು ಕಾರ್ಯಕರ್ತೆಯರನ್ನು ಸೇರಿಸಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಏಪ್ರಿಲ್‌ 30ರೊಳಗೆ ಉತ್ತರ ನೀಡಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಎರಡನೇ ಆರೋಪಿಯಾಗಿ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣವರ ಅವರಿಗೂ ಸಮನ್ಸ್‌ ಜಾರಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT