ಗುರುವಾರ , ಜನವರಿ 28, 2021
27 °C
ಗಮನ ಸೆಳೆದ ಮಾನವ ಬಂಧುತ್ವ ವೇದಿಕೆ

ಪ್ರಶಸ್ತಿ ಪುರಸ್ಕೃತರಿಗೆ ಹೆಲಿಕಾಪ್ಟರ್‌ ವಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಅಂಗವಾಗಿ ಭಾನುವಾರ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳ ಪ್ರಶಸ್ತಿ ಪುರಸ್ಕಾರದ ಬಳಿಕ ವಿಜೇತರು ಹೆಲಿಕಾಪ್ಟರ್‌ನಲ್ಲಿ ಸುತ್ತಿ ವಿಶಿಷ್ಟ ಅನುಭವ ಪಡೆದರು.

ನಗರದ ಮಹರ್ಷಿ ವಾಲ್ಮೀಕಿಕ್ರೀಡಾಂಗಣದಲ್ಲಿ ಮಾವನ ಬಂಧುತ್ವ ವೇದಿಕೆ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೋಕಾಕ ನಗರ ಸೇರಿದಂತೆ ಸುತ್ತ-ಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಸುತ್ತ ವಿಜೇತರಿಗೆ ಪ್ರದಕ್ಷಿಣೆ ಹಾಕಿಸಲಾಯಿತು. ಈ  ಕುರಿತು ಮೊದಲೇ ಪ್ರಕಟಿಸಲಾಗಿತ್ತು.

ಬೆಳಗಾವಿ, ಚಾಮರಾಜನಗರ, ತೀರ್ಥಹಳ್ಳಿ, ರಾಯಚೂರು, ಕಲಬುರ್ಗಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ 11 ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾದರು.

ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಪುರಸ್ಕೃತರನ್ನು ಸತ್ಕರಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು