ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ₹ 15 ಲಕ್ಷ ಚೆಕ್ ಹಸ್ತಾಂತರ

ಜನರ ಸಹಕಾರದಿಂದ ಮಾದರಿ ಕ್ಷೇತ್ರ ನಿರ್ಮಾಣ - ಚನ್ನರಾಜ ಹಟ್ಟಿಹೊಳಿ
Last Updated 26 ಜೂನ್ 2020, 14:07 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ 2 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಶಾಸಕರ ನಿಧಿಯಿಂದ ₹ 15 ಲಕ್ಷ ಚೆಕ್ ನ್ನು ಶುಕ್ರವಾರ ಹಸ್ತಾಂತರಿಸಲಾಯಿತು.

ನಿಲಜಿ ಗ್ರಾಮದ ಅಲೌಕಿಕ ಮಂದಿರದ ಜೀರ್ಣೋದ್ಧಾರಕ್ಕಾಗಿ ₹ 10 ಲಕ್ಷ ಹಾಗೂ ಸಾಂಬ್ರಾ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ₹ 5 ಲಕ್ಷ ಚೆಕ್‌ಗಳನ್ನು ಆಯಾ ದೇವಸ್ಥಾನದ ಸಮಿತಿಯವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ‘ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಗ್ರಾಮದಲ್ಲಿ ದೇವಸ್ಥಾನ ಇದ್ದರೆ ಆ ಗ್ರಾಮದಲ್ಲಿ, ಆ ಪ್ರದೇಶದಲ್ಲಿ ನೆಮ್ಮದಿ, ಶಾಂತಿ ಇರುತ್ತದೆ. ಹಣ ಸದುಪಯೋಗವಾಗಿ ಮಾದರಿಯಾಗಿ ದೇವಸ್ಥಾನ ನಿರ್ಮಾಣವಾಗಲಿ, ಜನರು ಸುಖ, ಶಾಂತಿ, ನೆಮ್ಮದಿಯಿಂದ ಬದುಕಲಿ’ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು,ಕಾರ್ಯಕರ್ತರು,‌ ದೇವಸ್ಥಾನದ ಕಮೀಟಿಯವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT