ಚಿಕ್ಕೋಡಿ: ‘ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು. ಉತ್ತಮ ಅಂಕ ಗಳಿಕೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷವಾದ ಕಾರ್ಯಾಗಾರ ಹಾಗೂ ತರಬೇತಿ ನೀಡಲಾಗುವುದು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಪಟ್ಟಣದ ಲೋಕೋಪಯೋಗಿ ಸಭಾ ಭವನದಲ್ಲಿ ಭಾನುವಾರ ನಡೆದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಜಿಲ್ಲೆಯಿಂದ ವಿದೇಶಕ್ಕೆ ಅಧ್ಯಯನಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಸಹಾಯ ನೀಡಲಾಗುವುದು. ಚಿಕ್ಕೋಡಿ ಜಿಲ್ಲೆಯ ವಿದ್ಯಾರ್ಥಿನಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವದು ಹೆಮ್ಮೆಯ ಸಂಗತಿ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಫಲಿತಾಂಶ ಹೆಚ್ಚಳವಾಗಲಿ’ ಎಂದು ಹೇಳಿದರು.

ಮಜಲಟ್ಟಿ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ವಿಶ್ವನಾಥ ಚೌಗಲಾ ‘ಉನ್ನತ ಸ್ಥಾನ ಪಡೆಯಲು ವಿದ್ಯಾರ್ಥಿಗಳ ಪರಿಶ್ರಮ ಅವಶ್ಯಕ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಡಿಡಿಪಿಐ ಆರ್.ಎಸ್. ಸೀತಾರಾಮು, ಡಿಡಿಪಿಯು ಪಿ.ಐ. ಭಂಡಾರೆ, ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಬಿಇಒ ಪ್ರಭಾವತಿ ಪಾಟೀಲ, ಜಿ.ಬಿ. ಮನ್ನೀಕೇರಿ, ಕಿರಣ ರಜಪೂತ, ಶಿವು ಪಾಟೀಲ, ಪಾಂಡು ಮನ್ನಿಕೇರಿ, ಪ್ರಭಾಕರ ಕೋರೆ, ರಾಜ್ಯ ಸರಕಾರಿ ನೌಕರರ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಬಿ.ಎ.ಕುಂಬಾರ, ಅರ್ಜುನ ನಾಯಿಕವಾಡಿ, ರಾಜು ಕೋಟಗಿ, ಶಂಕರಗೌಡ ಪಾಟೀಲ ಇದ್ದರು.
ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಸ್ವಾಗತಿಸಿದರು. ರಾಮಕೃಷ್ಣ ಮರಾಠೆ ಸಂವಿಧಾನ ಪೀಠಿಕೆ ಓದಿದರು.

Quote - ಇಂದಿನ ಮಕ್ಕಳು ಜೀವನದಲ್ಲಿ ಸಾಧನೆ ಮಾಡುವ ಗುರಿ ಇಟ್ಟುಕೊಳ್ಳಬೇಕು. ಶಿಸ್ತು ಕಠಿಣ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯ ಗಣೇಶ ಹುಕ್ಕೇರಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.