ಬೆಳಗಾವಿ: ‘ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದಿಂದ ಧಾರವಾಡ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಿಗೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರು ಬಿಡದಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದರ ಕಾಮಗಾರಿ ಇನ್ನೂ ನಡೆದಿದೆ. ಧಾರವಾಡದ ಕೈಗಾರಿಕಾ ಅಗತ್ಯ ಪೂರೈಸಲು ಹಿಡಕಲ್ ಜಲಾಶಯದಿಂದ ನೀರು ಹಂಚಿಕೆ ಮಾಡುವುದಕ್ಕೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಸರ್ಕಾರಿ ಮಟ್ಟದ ಸಮಿತಿ 0.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದೆ. ಈಗ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಳಸದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ’ ಎಂದರು.

‘ಹುಬ್ಬಳ್ಳಿ– ಧಾರವಾಡ ಮಹಾನಗರಕ್ಕೆ 24x7 ಮಾದರಿಯಲ್ಲಿ ಕುಡಿಯುವ ನೀರು ಪೂರೈಸಲು ಜಿಲ್ಲೆಯ ಜಲಾಶಯದಿಂದ ಹೆಚ್ಚಿನ ನೀರಿಗೆ ಬೇಡಿಕೆ ಇರಿಸಿರುವ ಪ್ರಸ್ತಾಪದ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.