ಸಂಕೇಶ್ವರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವವಾಗದಂತೆ ತಡೆಯಲು ಹಿಡಕಲ್ ಜಲಾಶಯದಿಂದ ತಾಂತ್ರಿಕ ಮಾರ್ಗಸೂಚಿಯಡಿ ವ್ಯವಸ್ಥಿತವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಿಖಿಲ ಕತ್ತಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಹಿರಣ್ಯಕೇಶಿ ನದಿ ಪಾತ್ರದಲ್ಲಿ ನಿರ್ಮಿಸಲಾಗುತ್ತಿರುವ 5 ಬ್ಯಾರೇಜ್ಗಳನ್ನು ಭರ್ತಿ ಮಾಡುವ ಯೋಜನೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ನದಿಯಲ್ಲಿ ಸದಾ ಕಾಲ ನೀರಿನ ಲಭ್ಯತೆ ಇರಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.

ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಕುಂದುಕೊರತೆ ಸಭೆಗಳು ಮುಕ್ತಾಯದ ಹಂತದಲ್ಲಿದ್ದು, ಬಾಕಿ ಇರುವ 7 ಹಳ್ಳಿಗಳಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು. ಇನ್ನು ಮುಂದೆ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಉದ್ದೇಶದಿಂದ ಪ್ರತಿ ಶುಕ್ರವಾರ ಸಂಕೇಶ್ವರದಲ್ಲಿ ಹಾಗೂ ಪ್ರತಿ ಸೋಮವಾರ ಹುಕ್ಕೇರಿಯಲ್ಲಿ ನಿಗದಿತವಾಗಿ ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸುವುದಾಗಿ ಶಾಸಕರು ಘೋಷಿಸಿದರು.

ಗಜಾನನ ಕ್ವಳ್ಳಿ, ಸುನೀಲ ಪರ್ವತರಾವ, ಶಿವಾನಂದ ಮುಡಶಿ, ಪ್ರಶಾಂತ ಪಾಟೀಲ, ಮಹಾದೇವ ಕ್ಷೀರಸಾಗರ, ಹರುಣ ಮುಲ್ಲಾ ಉಪಸ್ಥಿತರಿದ್ದರು. ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಪಿಎಸ್ಐ ಉಮೇಶ ಶೆಟ್ಟೆನ್ನವರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-1507234579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.