ಬೆಳಗಾವಿ: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಿರ್ಧರಿಸುತ್ತದೆ. ಕೆಪಿಸಿಸಿಗೆ ಪೂರ್ಣಪ್ರಮಾಣದ ಅಧ್ಯಕ್ಷ ಬೇಕು. ಮತ ಸೆಳೆಯುವವರು ಅಧ್ಯಕ್ಷರಾದರೆ ಮಾತ್ರ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ದೆಹಲಿಗೆ ಹೋಗಿ ಬಂದ ಬಳಿಕ ಈ ಬಗ್ಗೆ ಸುಳಿವು ಸಿಗಬಹುದು. ಚಳಿಗಾಲದ ಅಧಿವೇಶನದ ನಂತರ ದೆಹಲಿಗೆ ಹೋಗುವೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಕೆಪಿಸಿಸಿ ಅಧ್ಯಕ್ಷರಾಗುವುದು ಸಾಮಾನ್ಯವಲ್ಲ. ಹೈಕಮಾಂಡ್ ಸೂಚನೆ ಬಂದ ಬಳಿಕ ಇದರ ಬಗ್ಗೆ ಚರ್ಚಿಸಬೇಕು. ಚರ್ಚೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಬೇಕು. ಅಧ್ಯಕ್ಷರ ಸ್ಥಾನಕ್ಕೆ ನಾಲ್ಕಾರು ಜನ ಸ್ಪರ್ಧೆಯಲ್ಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.