ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುವರ್ಣ ವಿಧಾನಸೌಧಕ್ಕೆ ರೊವಾಂಡಾ ದೇಶದ ಹೈಕಮಿಷನರ್‌ ಭೇಟಿ

Published : 8 ಸೆಪ್ಟೆಂಬರ್ 2024, 8:23 IST
Last Updated : 8 ಸೆಪ್ಟೆಂಬರ್ 2024, 8:23 IST
ಫಾಲೋ ಮಾಡಿ
Comments

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಭಾನುವಾರ ಭೇಟಿ ನೀಡಿ, ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಮುಕಂಜಿರಾ ಅವರನ್ನು ಸ್ವಾಗತಿಸಿದರು. ನಂತರ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್‌, ಸಚಿವ ಸಂಪುಟ ಸಭಾಂಗಣವನ್ನು ಮುಕಂಜಿರಾ ವೀಕ್ಷಿಸಿದರು.

ವಿಧಾನಸಭೆ ಮತ್ತು ವಿಧಾನ ಪರಿಷತ್ ಕಾರ್ಯಚಟುವಟಿಕೆಗಳು ಹಾಗೂ ಸುವರ್ಣ ವಿಧಾನಸೌಧದಲ್ಲಿ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕುರಿತು ಜಾರಕಿಹೊಳಿ ವಿವರಿಸಿದರು.

ಲೋಕೋಪಯೋಗಿ ಇಲಾಖೆ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್‌.ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT