ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ನಿಯಮಾವಳಿ ಉಲ್ಲಂಘನೆ ಆರೋಪ: ಮುಖ್ಯಶಿಕ್ಷಕ ಅಮಾನತು

Published 12 ಮಾರ್ಚ್ 2024, 15:38 IST
Last Updated 12 ಮಾರ್ಚ್ 2024, 15:38 IST
ಅಕ್ಷರ ಗಾತ್ರ

ಹುಕ್ಕೇರಿ: ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸದೇ ಸರ್ಕಾರಿ ಸೇವಾ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂಬ ಕಾರಣದಿಂದ ತಾಲ್ಲೂಕಿನ ಅವರಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಆರ್. ನಾರಾಯಣಕರ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಧಾರವಾಡ ವಲಯ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಆದೇಶಿಸಿದ್ದಾರೆ.

ಶಾಲಾ ಮೂಲ ಸೌಲಭ್ಯಗಳ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಗ್ರಾಮೀಣ ಅಭ್ಯರ್ಥಿ ಮತ್ತು ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ. ಶಾಲೆಯ ಬೋಧಕ ಸಿಬ್ಬಂದಿಗೆ ಕಿರುಕುಳ ಸೇರಿದಂತೆ ಹಲವು ಗಂಭೀರ ಆರೋಪಗಳು ಇರುವ ಕಾರಣ ನಾರಾಯಣಕರ ಅವರನ್ನು ಇಲಾಖಾ ವಿಚಾರಣೆ ಕಾಯ್ದರಿಸಿ ಅಮಾನತುಗೊಳಿಸಲು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕರ ಉಲ್ಲೇಖಿತ ಪತ್ರದ ಪ್ರಕಾರ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT