ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ರಾಮದುರ್ಗ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

Last Updated 4 ಫೆಬ್ರುವರಿ 2022, 8:54 IST
ಅಕ್ಷರ ಗಾತ್ರ

ಬೆಳಗಾವಿ: ಉಡುಪಿ ಜಿಲ್ಲೆಯ ಕುಂದಾಪುರದ ಕೆಲವು ಕಾಲೇಜುಗಳ ವಿದ್ಯಾರ್ಥಿನಿಯರು ಹಿಜಾಬ್‌, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದು ವಿವಾದ ಸೃಷ್ಟಿಯಾಗಿರುವ ನಡುವೆಯೇ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಹಾಕಿಕೊಂಡು ಹಾಜರಾಗಿದ್ದಾರೆ. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಗುರುವಾರ ನಡೆದಿದ್ದು, ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.

ತರಗತಿಯಿಂದ ಹೊರಬರುವ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿರುವುದು ಹಾಗೂ ಕೆಲವರಿಗೆ ಹಾಕಿಕೊಳ್ಳುವಂತೆ ವ್ಯಕ್ತಿಗಳಿಬ್ಬರು ಸೂಚಿಸುವುದು ವಿಡಿಯೊದಲ್ಲಿದೆ. ಘಟನೆಯನ್ನು ಮುಚ್ಚಿ ಹಾಕುವುದಕ್ಕೆ ಕಾಲೇಜಿನವರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕೇಸರಿ ಶಾಲು ತೆಗೆಸಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.

‘ಕಾಲೇಜಿಗೆ ಸಂಬಂಧವಿಲ್ಲದ ಹಾಗೂ ಅಲ್ಲಿ ವಿದ್ಯಾರ್ಥಿಗಳಲ್ಲದ ಕೆಲ ಯುವಕರು ಬಂದು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿಸಿದ್ದಾರೆ. ಅವರೇ ಶಾಲುಗಳನ್ನು ತಂದುಕೊಟ್ಟಿದ್ದರು’ ಎಂದು ತಿಳಿದುಬಂದಿದೆ.

ಆ ಯುವಕರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT