ಕೃಷ್ಣಕುಮಾರ್ ಅಧಿಕಾರ ಸ್ವೀಕಾರ

ಗುರುವಾರ , ಜೂಲೈ 18, 2019
24 °C

ಕೃಷ್ಣಕುಮಾರ್ ಅಧಿಕಾರ ಸ್ವೀಕಾರ

Published:
Updated:

ಬೆಳಗಾವಿ: ಇಲ್ಲಿನ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಕೃಷ್ಣಕುಮಾರ್ ಗುರುವಾರ ಅಧಿಕಾರ ಸ್ವೀಕರಿಸಿದರು.

ಈ ಹುದ್ದೆಯಲ್ಲಿ 3 ವರ್ಷ 9 ತಿಂಗಳು ಕಾರ್ಯನಿರ್ವಹಿಸಿದ್ದ ಟಿ.ಪಿ. ಶೇಷ ಕಾರಾಗೃಹಗಳ ಉಪಮಹಾನಿರೀಕ್ಷಕರ ಹುದ್ದೆಗೆ ಬಡ್ತಿ ಪಡೆದು ಬೆಂಗಳೂರಿಗೆ ವರ್ಗವಾಗಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಕೃಷ್ಣಕುಮಾರ್‌ ಅವರನ್ನು ಕಲಬುರ್ಗಿಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಸನ್ಮಾನಿಸಿ, ಆತ್ಮೀಯವಾಗಿ ಸ್ವಾಗತಿಸಿದರು.

ಮುನ್ಯಾಳ ನೂತನ ಡಿಎಚ್‌ಒ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ಡಾ.ಎಸ್.ವಿ. ಮುನ್ಯಾಳ ಅಧಿಕಾರ ವಹಿಸಿಕೊಂಡರು.

ಅವರು, ಹೆಚ್ಚುವರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು.

ನರಟ್ಟಿ ಉಪನಿರ್ದೇಶಕ

ಈವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯಾಗಿದ್ದ ಡಾ.ಅಪ್ಪಾಸಾಹೇಬ ನರಟ್ಟಿ ಬೆಳಗಾವಿ ವಿಭಾಗದ ಸಹ ನಿರ್ದೇಶಕರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅನಿಲ ಕೋರಬು ಅಧಿಕಾರ ಸ್ವೀಕಾರ

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಯಾಗಿ ಡಾ.ಅನಿಲ ಕೋರಬು ಅಧಿಕಾರ ವಹಿಸಿಕೊಂಡಿದ್ದಾರೆ.

ಅವರು ಈ ಹಿಂದೆ ಮುತ್ಯಾನಟ್ಟಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !