ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಇಬ್ಬರಿಗೆ ಕೋವಿಡ್–19 ದೃಢಪಟ್ಟಿದೆ.

‘ಪೆರೋಲ್ ಮೇಲೆ ಹೋಗಿ ಮರಳಿದ್ದ ವ್ಯಕ್ತಿ ಹಾಗೂ ಒಬ್ಬ ವಿಚಾರಣಾಧೀನ ಕೈದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದ್ದ ಇಬ್ಬರನ್ನು ವರದಿ ಬಂದ ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ 37 ಕೈದಿಗಳಿಗೆ ಸೋಂಕು ದೃಢಪಟ್ಟಿತ್ತು. ಇಲ್ಲಿ ಸದ್ಯಕ್ಕೆ 861 ಶಿಕ್ಷೆಗೊಳಗಾದವರು ಹಾಗೂ ವಿಚಾರಣಾಧೀನ ಕೈದಿಗಳು ಇದ್ದಾರೆ.

ಹೊಸದಾಗಿ ಜೈಲಿಗೆ ಬರುವವರಿಗೆ ಕೋವಿಡ್ ನೆಗಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ವರದಿ ಬರುವರೆಗೆ ಅವರನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗುತ್ತದೆ. 14 ದಿನಗಳ ಕ್ವಾರಂಟೈನ್ ಅವಧಿ ಮುಗಿಯುವವರೆಗೆ ಅಲ್ಲಿರಬೇಕಾಗುತ್ತದೆ. ಬಳಿಕ ಸಾಮಾನ್ಯ ಸೆಲ್ಗೆ ಕಳುಹಿಸಲಾಗುತ್ತದೆ. ಕೊರೊನಾ ವ್ಯಾಪಿಸುತ್ತಿರುವುದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ವಾರಕ್ಕೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.