ಗುರುವಾರ , ಮೇ 19, 2022
22 °C

ಬೆಳಗಾವಿ: ಮಸೀದಿ ಮೇಲೆ ಭಗವಾಧ್ವಜ ಕಟ್ಟಿದ ಕಿಡಿಗೇಡಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅರಭಾವಿ ಪಟ್ಟಣದ ಸತ್ತಿಗೇರಿ ಮಡ್ಡಿ ತೋಟದ ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಬಣ್ಣದ ಧ್ವಜ ಕಟ್ಟಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮುಸ್ಲಿಮರು ಬೆಳಿಗ್ಗೆ ಪ್ರಾರ್ಥನೆಗೆಂದು ಬಂದಾಗ, ಧ್ವಜ ಕಟ್ಟಿರುವುದು ಗೊತ್ತಾಗಿದೆ. ನಸುಕಿನಲ್ಲಿ ಮಸೀದಿ ಮೇಲೆ ಭಗವಾಧ್ವಜ ಕಟ್ಟಿದ್ದಾರೆ ಎನ್ನಲಾಗಿದೆ. ಅಲ್ಲಿನ ಮುಸ್ಲಿಮರು ಹಾಗೂ ಹಿಂದೂ ಹಿರಿಯರು ಮುಂದೆ ನಿಂತು ಧ್ವಜ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಲು ಎರಡೂ ಸಮುದಾಯದ ಮುಖಂಡರು ಮುಂದಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು