ಮಂಗಳವಾರ, ಮಾರ್ಚ್ 31, 2020
19 °C
ಜನತಾ ಕರ್ಫ್ಯೂ

ಬೆಳಗಾವಿ: ಜನತಾ ಕರ್ಫ್ಯೂ, ಹೋಟೆಲ್‌ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಮಾರ್ಚ್‌ 22ರಂದು ಜನತಾ ಕರ್ಫ್ಯೂಗೆ ಬೆಂಬಲ ನೀಡಲಾಗುವುದು. ನಗರದಲ್ಲಿ ಅಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಹೋಟೆಲ್‌ಗಳನ್ನು ಬಂದ್ ಮಾಡಲಾಗುವುದು’ ಎಂದು ಹೋಟೆಲ್‌ ಮಾಲೀಕರ ಸಂಘ ತಿಳಿಸಿದೆ.

ಮದ್ಯದಂಗಡಿಗಳೂ ಬಂದ್

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಮಾರ್ಚ್‌ 22ರಂದು ಜನತಾ ಕರ್ಫ್ಯೂ ಬೆಂಬಲಿಸಿ ಅಂದು ಎಲ್ಲ ರೀತಿಯ ಮದ್ಯದಂಗಡಿಗಳನ್ನೂ ಬಂದ್ ಮಾಡಲಾಗುವುದು ಎಂದು ಬೆಳಗಾವಿ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಆರ್.ಎ. ಶಾಲಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಭಾವ ಗೋಷ್ಠಿ ರದ್ದು

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಮಾರ್ಚ್‌ 24ರಂದು ನಡೆಸಲು ಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯನ್ನು ಕೊರೊನಾ ವೈರಾಣು ಸೋಂಕು ನಿಯಂತ್ರಣ ಮತ್ತು ಆರೋಗ್ಯದ ದೃಷ್ಟಿಯಿಂದ ರದ್ದುಪಡಿಸಲಾಗಿದೆ ಎಂದು ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ.

ವಧು-ವರರ ಸಮಾವೇಶ ಮುಂದೂಡಿಕೆ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಹಾಗೂ ಕೆಎಲ್‌ಇ ಸಂಸ್ಥೆ ಸಹಯೋಗದಲ್ಲಿ ವೀರಶೈವ ಲಿಂಗಾಯತ ವಧು ವರ ಅನ್ವೇಷಣ ಕೇಂದ್ರವು ಏ. 12ರಂದು ಇಲ್ಲಿನ ಜೆಎನ್ಎಂಸಿಯ ಡಾ.ಜೀರಗೆ ಸಭಾಂಗಣದಲ್ಲಿ ಆಯೋಜಿಸಿದ್ದ ವಧು–ವರ, ಪಾಲಕರ ಸಮಾವೇಶವನ್ನು ಕೊರೊನಾ ವೈರಾಣು ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಅನ್ವೇಷಣ ಕೇಂದ್ರದ ಅಧ್ಯಕ್ಷ ಡಾ.ಎಫ್.ವಿ. ಮಾನ್ವಿ ತಿಳಿಸಿದ್ದಾರೆ.

ಪೆಟ್ರೋಲ್‌ ಬಂಕ್‌ಗಳ ಬಂದ್ ಇಲ್ಲ

ಬೆಳಗಾವಿ: ‘ಪ್ರಧಾನಿ ಕರೆ ನೀಡಿರುವ ಜನತಾ ಕರ್ಫ್ಯೂವಿನ ದಿನವಾದ ಮಾರ್ಚ್‌ 22ರಂದು ಪೆಟ್ರೋಲ್‌ ಬಂಕ್‌ಗಳನ್ನು ಬಂದ್ ಮಾಡುವ ಕುರಿತು ನಿರ್ಧಾರ ಕೈಗೊಂಡಿಲ್ಲ’ ಎಂದು ಜಿಲ್ಲಾ ಪೆಟ್ರೋಲ್‌ ಬಂಕ್‌ ಮಾಲೀಕರ ಸಂಘದ ಅಧ್ಯಕ್ಷ ರಾಜದೀಪ ಕೌಜಲಗಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)