ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

600 ಫಲಾನುಭವಿಗಳಿಗೆ ಶೀಘ್ರದಲ್ಲಿ ಸೂರು: ಶಾಸಕಿ ಶಶಿಕಲಾ ಜೊಲ್ಲೆ ಮಾಹಿತಿ

Published : 21 ಆಗಸ್ಟ್ 2024, 15:42 IST
Last Updated : 21 ಆಗಸ್ಟ್ 2024, 15:42 IST
ಫಾಲೋ ಮಾಡಿ
Comments

ನಿಪ್ಪಾಣಿ: ‘ನಗರದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ₹ 133 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ ಜಿ +2 ಮಾದರಿಯ 2,052 ಮನೆಗಳ ನಿರ್ಮಾಣ ಕಾಮಗಾರಿಯನ್ನು ಬುಧವಾರ ಶಾಸಕಿ ಶಶಿಕಲಾ ಜೊಲ್ಲೆ ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಕಾಮಗಾರಿಯ ಪ್ರಗತಿ ಕಾರ್ಯವನ್ನು ಪರಿಶೀಲಿಸಿ ಸೂಚನೆಗಳನ್ನು ನೀಡಿದರು.

ಬಳಿಕ ಮಾತನಾಡಿದ ಅವರು, ‘ಪ್ರಧಾನಮಂತ್ರಿ ಆವಾಸ ಯೋಜನೆಯ ಅಡಿ ಈಗ ಮತ್ತೆ ₹ 21 ಕೋಟಿ ಮಂಜೂರಾಗಿದೆ. 600 ಮನೆಗಳು ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿವೆ. ಹೆಚ್ಚಿನ ಮೂಲ ಸೌಕರ್ಯಗಳೊಂದಿಗೆ (ನೀರು, ರಸ್ತೆ, ಚರಂಡಿ, ವಿದ್ಯುತ್) ಕಾಮಗಾರಿಯನ್ನು 2 ತಿಂಗಳಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ದಸರಾ ಹಬ್ಬದೊಳಗೆ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಲಾಗುವುದು. 6 ಲಕ್ಷ ಲೀಟರ್ ನೀರಿನ ಟ್ಯಾಂಕ್ ಸಿದ್ಧಪಡಿಸಿ ಪೈಪ್ ಲೈನ್ ಅಳವಡಿಸಲಾಗುವುದು. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಟ್ಟ ಮಾತಿನಂತೆ ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿ, ಫಲಾನುಭವಿಗಳಿಗೆ ಸೂರು ಕಲ್ಪಿಸಲಾಗುವುದು’ ಎಂದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ, ವಿನಯ, ಪೌರಾಯುಕ್ತ ದೀಪಕ ಹರದಿ, ನಗರಸಭೆ ಸದಸ್ಯ ರಾಜೇಂದ್ರ ಗುಂದೇಶಾ, ಸಂತೋಷ ಸಾಂಗವಕರ, ಸುಜಾತಾ ಕದಮ, ಆಶಾ ಟವಳೆ, ದತ್ತಾತ್ರೇಯ ಜೋತ್ರೆ, ರವಿ ಕದಮ, ಪ್ರಣವ ಮಾನವಿ, ಮಹೇಶ ಸೂರ್ಯವಂಶಿ, ಸೂರಜ ಖವರೆ, ಪ್ರಶಾಂತ ಕೇಸ್ತೆ, ಪ್ರಸಾದ ಔಂಧಕರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT