ಗುರುವಾರ , ಜುಲೈ 29, 2021
23 °C

ಅಗ್ನಿ ಆಕಸ್ಮಿಕ: ವಸ್ತುಗಳು ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ: ಗೀಸರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ನಗರದ ಬಸವನಗರ ಬಡಾವಣೆಯಲ್ಲಿ ಗುರುವಾರ ಸಂಭವಿಸಿದೆ.

ಚಿನ್ನಾಭರಣ ವ್ಯಾಪಾರಿ ಸುರೇಶ ರಿಕಬಚಂದ ಶಹಾ ಅವರ ಮನೆಯಲ್ಲಿ ಈ ಅನಾಹುತ ಸಂಭವಿಸಿದೆ. ಗೀಸರ್ ಚಾಲನೆ ಮಾಡಿದಾಗ ಸ್ಫೋಟವಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.