ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಮನೆಗಳ್ಳರ ಬಂಧನ

Last Updated 20 ನವೆಂಬರ್ 2019, 16:20 IST
ಅಕ್ಷರ ಗಾತ್ರ

ಬೆಳಗಾವಿ: ವಿವಿಧೆಡೆ ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿರುವ ಗ್ರಾಮೀಣ ಠಾಣೆ ಪೊಲೀಸರು, 2 ದ್ವಿಚಕ್ರವಾಹನಗಳ ಸಮೇತ ₹ 10 ಲಕ್ಷ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಸುಳಗಾ ನಿವಾಸಿ ಯಲ್ಲಪ್ಪ ಕುಡಚಿಕರ, ಯೋಗೇಶ ಪಾಟೀಲ ಹಾಗೂ ಮೋಹನ ಪಾಟೀಲ ಬಂಧಿತರು. ನ.16ರಂದು ಹಂಗರಗಾ ಗ್ರಾಮದಲ್ಲಿ ಹಾಡಹಗಲೇ ಮನೆಯಲ್ಲಿ ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ಹಿಂಡಲಗಾ ಬಾಕ್ಸೈಟ್‌ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

‘ಇವರು ಮಚ್ಚೆ, ಹಂಗರಗಾ, ಝಾಡಶಹಾಪುರ, ಗುರುಪ್ರಸಾದನಗರ, ಬಸುರತೆ ಗ್ರಾಮಗಳಲ್ಲಿ ಹಗಲು ಮನೆಗಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ. ಕಳವು ಮಾಡಿ ಬಚ್ಚಿಟ್ಟಿದ್ದ ₹ 7.70 ಲಕ್ಷ ಮೌಲ್ಯದ 220 ಗ್ರಾಂ. ಚಿನ್ನ, ₹ 5ಸಾವಿರ ಮೌಲ್ಯದ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ 2 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಠಾಣೆಯ 5 ಹಾಗೂ ಕಾಕತಿ ಠಾಣೆಯ ಒಂದು ಪ್ರಕರಣ ಪತ್ತೆ ಹಚ್ಚಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಎಸಿಪಿ ಕೆ. ಶಿವಾರೆಡ್ಡಿ ಹಾಗೂ ಅಪರಾಧ ವಿಭಾಗದ ಎಸಿಪಿ ಮಹಾಂತೇಶ್ವರ ಜಿದ್ದಿ ಮೇಲ್ವಿಚಾರಣೆಯಲ್ಲಿ ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್ ಸುನೀಲ್‌ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT