ಬೆಳಗಾವಿ: ‘ಜಿಲ್ಲೆಯಲ್ಲಿ ಒಂದು ವಾರದಲ್ಲಿ ವಾಡಿಕೆಗಿಂತಲೂ ಶೇ.60ರಷ್ಟು ಅಧಿಕ ಮಳೆಯಾಗಿದೆ. ಮೂವರ ಸಾವಾಗಿದೆ. 40 ಪೂರ್ಣ ಮತ್ತು 1,200ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಬೆಳೆ ಜಲಾವೃತಗೊಂಡಿವೆ. ಒಂದು ವಾರದಲ್ಲಿ ಜಂಟಿ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಕಲೆ ಹಾಕಲಾಗುವುದು. 37 ಸೇತುವೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಖಾನಾಪುರ ತಾಲ್ಲೂಕಿನ ಎರಡು ಸೇತುವೆ ಹೊರತುಪಡಿಸಿ ಉಳಿದ ಕಡೆ ಪರ್ಯಾಯ ಮಾರ್ಗಗಳಿವೆ. ಪ್ರವಾಹದಿಂದ ಬಾಧಿತವಾದ ಗ್ರಾಮಗಳಲ್ಲಿನ ಜನರನ್ನು ರಕ್ಷಿಸಿ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಆಸರೆ ಒದಗಿಸಲಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.