ಪೌರಕಾರ್ಮಿಕರಿಗೆ ಮನೆಗಳ ನಿರ್ಮಾಣಕ್ಕೆ ಚಾಲನೆ

7
ಶಂಕುಸ್ಥಾಪನೆ ನೆರವೇರಿಸಿದ ಸಚಿವ ಸತೀಶ

ಪೌರಕಾರ್ಮಿಕರಿಗೆ ಮನೆಗಳ ನಿರ್ಮಾಣಕ್ಕೆ ಚಾಲನೆ

Published:
Updated:
Prajavani

ಬೆಳಗಾವಿ: ಇಲ್ಲಿನ ಅಜಂ ನಗರದಲ್ಲಿರುವ ಪೌರಕಾರ್ಮಿಕರ ಕಾಲೊನಿಯಲ್ಲಿ ನಗರಪಾಲಿಕೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗೆ ಜಿ+3 ಮಾದರಿಯ ವಸತಿಗೃಹಗಳ ನಿರ್ಮಾಣಕ್ಕೆ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ನಿರ್ಮಾಣ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಪೌರಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಭೂಮಿಪೂಜೆ ನೆರವೇರಿಸಿದರು. ಪಾಲಿಕೆ ಸದಸ್ಯೆ ಸರಳಾ ಹೇರೇಕರ, ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತ ಶಶಿಧರ ಕುರೇರ ಇದ್ದರು.

ಇದಕ್ಕೂ ಮುಂಚೆ ಕಾಲೊನಿ ಸುತ್ತುಹಾಕಿದ ಸಚಿವರು, ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು ಪೌರಕಾರ್ಮಿಕರು ಹಾಗೂ ಲಭ್ಯವಿರುವ ವಸತಿಗೃಹಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಗೃಹಭಾಗ್ಯ ಯೋಜನೆಯಲ್ಲಿ ಮೊದಲ ಹಂತದಲ್ಲಿ 72 ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ₹ 3.50 ಕೋಟಿ ಅನುದಾನ ಸಿಕ್ಕಿದೆ. ಪೌರಕಾರ್ಮಿಕರಿಗೆ ಅವರದ್ದೇ ಆಗ ಜಾಗದ ಕೊರತೆ ಇರುವುದರಿಂದ, ಎಪಿಎಂಸಿ ರಸ್ತೆಯಲ್ಲಿರುವ ಪೌರಕಾರ್ಮಿಕರ ಮನೆಗಳ ಬಳಿ ಇರುವ ಪಾಲಿಕೆಗೆ ಸೇರಿದ ಎರಡು ಎಕರೆ ಖಾಲಿ ಜಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಿಕೊಡಲು ಯೋಜಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ಶಶಿಧರ ಕುರೇರ ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !