ಮಂಗಳವಾರ, ಮಾರ್ಚ್ 2, 2021
19 °C

‘ಗಡಿ ವಿವಾದ ಇತ್ಯರ್ಥಕ್ಕಾಗಿ ಇನ್ನೆಷ್ಟು ದಿನ ಹೋರಾಡಬೇಕು?’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಗಡಿ ವಿವಾದ ಬಗೆಹರಿಸುವಂತೆ ಆಗ್ರಹಿಸಿ ಗಡಿಯಲ್ಲಿ ಮರಾಠಿ ಭಾಷಿಗರು ಇನ್ನೆಷ್ಟು ದಿನ ಹೋರಾಡಬೇಕು?’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ ಕಿರಣ ಠಾಕೂರ್ ಕೇಳಿದರು.

ಎಂಇಎಸ್‌ ವತಿಯಿಂದ ಇಲ್ಲಿನ ಹುತಾತ್ಮ ಚೌಕದಲ್ಲಿ ಭಾನುವಾರ ಸರಳವಾಗಿ ನಡೆದ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗಡಿ ವಿವಾದವನ್ನು ಶೀಘ್ರವಾಗಿ ಬಗೆಹರಿಸಬೇಕು. ಮಹಾರಾಷ್ಟ್ರ ಸರ್ಕಾರ ಕೂಡ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನಾವು ನ್ಯಾಯ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆಯನ್ನಲ್ಲ’ ಎಂದರು.

ಎಂಇಎಸ್ ಅಧ್ಯಕ್ಷ ದೀಪಕ ದಳವಿ ಮಾತನಾಡಿ, ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗವಹಿಸುವ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪಕ್ಕೆ ಅನುಮತಿ ನೀಡಿರುವ ಜಿಲ್ಲಾಡಳಿತ ಎಂಇಎಸ್‌ನ ರ‍್ಯಾಲಿಗೆ ಅನುಮತಿ ನಿರಾಕರಿಸಿದೆ. ಶಾ ಸಮಾವೇಶಕ್ಕೆ ಅಡ್ಡಿಯಾಗದ ಕೋವಿಡ್ ನಮ್ಮ ಕಾರ್ಯಕ್ರಮಕ್ಕೆ ಅಡ್ಡಿಯಾಗುತ್ತದೆಯೇ’ ಎಂದು ಪ್ರಶ್ನಿಸಿದರು.

‘ಮಹಾನಗರಪಾಲಿಕೆ ಮುಂಭಾಗ ಹಾರಿಸಿರುವ ಕನ್ನಡ ಧ್ವಜವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜ. 21ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡರು ಹುತಾತ್ಮ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಮುಖಂಡ ಪ್ರಕಾಶ ಶಿರೋಳಕರ ಇದ್ದರು. ಶಿವಸೇನೆಯಿಂದಲೂ ಗೌರವ ಸೂಚಿಸಲಾಯಿತು.

ಕೋವಿಡ್ ಕಾರಣದಿಂದ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ಕೊಟ್ಟಿರಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು