ಎಂ.ಕೆ.ಹುಬ್ಬಳ್ಳಿ: ‘ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ, ಶಿಥಿಲಾವಸ್ಥೆ ತಲುಪಿದೆ. ಇದನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಬುಬಕರ್ ಖಾದ್ರಿ ಒತ್ತಾಯಿಸಿದರು.

ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ‘ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಜ್ಞಾನಾರ್ಜನೆಗಾಗಿ ಬಳಸಬೇಕಾದ ಈ ಗ್ರಂಥಾಲಯದ ಕಟ್ಟಡ ದುಃಸ್ಥಿತಿಯಲ್ಲಿದೆ. ಆತಂಕದ ಮಧ್ಯೆಯೇ ಕಾರ್ಯನಿರ್ವಹಿಸುತ್ತಿದೆ. ಗ್ರಂಥಾಲಯದ ಚಾವಣಿ ಕುಸಿಯುವ ಹಂತ ತಲುಪಿದ್ದು, ಗೋಡೆಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಮೂಲಸೌಕರ್ಯ ಕೊರತೆಯಿಂದ ಬಳಲುತ್ತಿದೆ. ಟೇಬಲ್, ಕುರ್ಚಿಗಳ ವ್ಯವಸ್ಥೆಯೂ ಇಲ್ಲದೆ, ವಿದ್ಯಾರ್ಥಿಗಳು ಓದಲು ಪರದಾಡುತ್ತಿದ್ದಾರೆ. ಸರ್ಕಾರ ಹಾಗೂ ಸಂಬಂಧಿತ ಸಚಿವರ ನಿರ್ಲಕ್ಷ್ಯ ಖಂಡನೀಯ’ ಎಂದು ದೂರಿದರು.

‘ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಸರ್ಕಾರದ ಬೇಜವಾಬ್ದಾರಿತನದಿಂದ ಅವರ ಭವಿಷ್ಯವೇ ಅಪಾಯಕ್ಕೆ ಒಡ್ಡಿದೆ. ಅನಾಹುತ ಸಂಭವಿಸುವ ಮುನ್ನ, ಎಚ್ಚೆತ್ತುಕೊಂಡು ಈಗ ಇರುವ ಕಟ್ಟಡ ನೆಲಸಮ ಮಾಡಿ, ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-21-1452760448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.