ಎಂ.ಕೆ.ಹುಬ್ಬಳ್ಳಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಾರ್ವಜನಿಕರು ಕಡ್ಡಾಯವಾಗಿ ಮೂಲದಲ್ಲೇ ನಾಲ್ಕು ತರನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕೆಂದು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಶಂಕರ ಮಾಸ್ತಿಹೊಳಿಮಠ ತಿಳಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಏ.1ರಿಂದ ಜಾರಿಗೆ ತಂದಿರುವ ‘ಘನತ್ಯಾಜ್ಯ ವಸ್ತು ನಿರ್ವಹಣೆ’ ನಿಯಮದನ್ವಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು, ವ್ಯಾಪಾರಸ್ಥರು, ಹೊಟೇಲ್ ಮತ್ತು ಬಾರ್ ರೆಸ್ಟೋರೆಂಟ್ ಸೇರಿ ಎಲ್ಲ ಸಾರ್ವಜನಿಕರು ಈ ಸೂಚನೆ ಪಾಲಿಸಬೇಕು. ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಕಾಳಜಿ (ಅಪಾಯಕಾರಿ) ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ ನೀಡಬೇಕೆಂದು ತಿಳಿಸಿದ್ದಾರೆ.

ಇದಕ್ಕೆ ತಪ್ಪಿದ್ದಲ್ಲಿ ಎಸ್ಡಬ್ಲ್ಯೂ ನಿಯಮ-2026ರಂತೆ ದಂಡ ವಿಧಿಸುವುದರ ಜೊತೆಗೆ ಪಟ್ಟಣ ಪಂಚಾಯಿತಿಯಿಂದ ಒದಗಿಸಲಾಗುವ ಮೂಲ ಸೌಕರ್ಯಗಳನ್ನು ಕಡಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿ ಸಂರ್ಪಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-21-820361423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.