ಹುಕ್ಕೇರಿ: ತಾಲ್ಲೂಕಿನಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ ಖಂಡಿಸಿ ಪಟ್ಟಣದ ಕೋರ್ಟ್ ಸರ್ಕಲ್ನಲ್ಲಿ ನಡೆಯುತ್ತಿರುವ ರಾಜ್ಯ ರೈತ ಸಂಘದ ಬೃಹತ್ ಪ್ರತಿಭಟನೆ ಶುಕ್ರವಾರ ಮೂರನೇ ದಿನ ಪೂರೈಸಿತು. ಶನಿವಾರ ಹುಕ್ಕೇರಿ ಸಂಪೂರ್ಣ ಬಂದ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಮಾವೇಶ ಉದ್ಧೇಶಿಸಿ ಮಾತನಾಡಿದ ರೈತ ಸಂಘದ ನಿಪ್ಪಾಣಿ ಘಟಕದ ಅಧ್ಯಕ್ಷ ರಾಜು ಪವಾರ್, ರೈತರಿಂದ ಮತ ಪಡೆದು ವಿಧಾನಸಭೆಗೆ ಆಯ್ಕೆಯಾದ ಬಳಿಕ ರೈತರ ರಕ್ಷಣೆ ಮಾಡುವಲ್ಲಿ ಜನಪ್ರತಿನಿಧಿಗಳು ವಿಫಲಗೊಂಡಿದ್ದಾರೆ ಎಂದು ಕಿಡಿ ಕಾರಿದರು.

ಹುಕ್ಕೇರಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಏತ ನೀರಾವರಿ ಯೋಜನೆ ತಕ್ಷಣ ಜಾರಿಗೊಳಿಸಿ ಹುಕ್ಕೇರಿ ತಾಲ್ಲೂಕನ್ನು ಸಂಪೂರ್ಣ ನೀರಾವರಿ ಮಾಡಲೇಬೇಕು ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಮಾತನಾಡಿ, ಸ್ಥಳೀಯ ಸ್ವಾಮೀಜಿಗಳು ಊಟೋಪಚಾರ ಒದಗಿಸಿದ್ದು, ಬೇರೆ ಬೇರೆ ಗ್ರಾಮದ ಜನರು ರೊಟ್ಟಿ, ಅಕ್ಕಿ ಪೂರೈಸುತ್ತ, ದೇಣಿಗೆ ನೀಡುತ್ತ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಮಹಿಳೆಯರ ಆಕ್ರೋಶ: ಪ್ರತಿಭಟನೆಯಲ್ಲಿ ಪಾಲ್ಗೊಂಡ ತಾಲ್ಲೂಕಿನ ಶಿಪ್ಪೂರು ಗ್ರಾಮದ ಮಹಿಳೆಯರು ಮಾತನಾಡಿ, ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ₹250 ಕೊಟ್ಟು ಟ್ಯಾಂಕರ್ ನೀರು ತರಿಸುವ ಪರಿಸ್ಥಿತಿ ಬಂದಿದೆ. ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು ಎಚ್ಚರಿಕೆ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ವರ್ತಕರು ಅಂಗಡಿ-ಮುಂಗಟ್ಟು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಮುಖಂಡರಾದ ಮಲ್ಲಪ್ಪ ಅಂಗಡಿ, ಸತ್ಯಪ್ಪ ನಾಯಿಕ, ವಕೀಲ ಭೀಮಸೇನ ಬಾಗಿ, ಹುಕ್ಕೇರಿ ಹನ್ನೊಂದು ಜಮಾತ ಅಧ್ಯಕ್ಷ ಸಲಿಂ ನಧಾಪ, ನಿಸ್ಸಾರ ನಧಾಪ,ಭೀಮಗೌಡ ಗಿರಿಗೌಡನವರ, ವಕೀಲ ಎಸ್.ವೈ.ಏಗನ್ನವರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ವ್ಯಾಪಾರಸ್ಥರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಹಿಳೆಯರು ಸೇರಿ ನೂರಾರು ರೈತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-131021323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.