ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್: ₹2.50 ಕೋಟಿ ಲಾಭ'

Published 2 ಏಪ್ರಿಲ್ 2024, 15:59 IST
Last Updated 2 ಏಪ್ರಿಲ್ 2024, 15:59 IST
ಅಕ್ಷರ ಗಾತ್ರ

ಹುಕ್ಕೇರಿ: ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶಾಸನಬದ್ದ ಪ್ರಾವಧಾನ ವರ್ಗಾವಣೆ ಮಾಡಿದ ನಂತರವೂ ₹2.50 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಪವನ್ ರಮೇಶ ಕತ್ತಿ ಹೇಳಿದರು.

ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬ್ಯಾಂಕ್‌ ಪ್ರಸ್ತುತ ₹38.70 ಕೋಟಿ ಸ್ವಂತ ಬಂಡವಾಳ, ₹488.09 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ₹435 .66 ಕೋಟಿ ಠೇವು ಸಂಗ್ರಹಿಸಿ ₹233.99 ಕೋಟಿ ಸಾಲ ವಿತರಿಸಲಾಗಿದೆ. ಶೇ 99.82 ರಷ್ಟು ಸಾಲ ವಸೂಲಾತಿ ಮಾಡಿದ್ದು, ಒಟ್ಟು ₹6.77 ಕೋಟಿ ಲಾಭ ಗಳಿಸಿದೆ ಎಂದರು.

ಬೆಲ್ಲದ-ಬಾಗೇವಾಡಿಯಲ್ಲಿ ಪ್ರಧಾನ ಆಡಳಿತ ಕಚೇರಿ ಸಹಿತ 27 ಶಾಖೆಗಳೊಂದಿಗೆ ಬ್ಯಾಂಕ್‌ ಸಂಪೂರ್ಣ ಗಣಕೀಕೃತಗೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸೇಪ್ ಲಾಕರ್, ಇ-ಸ್ಟಾಂಪಿಂಗ್, ನೆಫ್ಟ್ ಮತ್ತು ಆರ್.ಟಿ.ಜಿ.ಎಸ್., ಎ.ಟಿ.ಎಂ, ಐ.ಎಂ.ಪಿ.ಎಸ್, ಮೊಬೈಲ್ ಬ್ಯಾಂಕಿಂಗ್ ಸೇವೆಗಳೊಂದಿಗೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.

ಸಿಬ್ಬಂದಿಯ ಶ್ರಮಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೇ 25 ಎಕ್ಸ್‌ಗ್ರೇಷಿಯಾ (ಬಹುಮಾನ) ಕೊಡುತ್ತಿದ್ದು, ಸಿಬ್ಬಂದಿಗೆ ಆರೋಗ್ಯ ಮತ್ತು ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಆರ್ಥಿಕ ಸಲಹೆಗಾರ ಎಂ.ಕೆ.ಅಮ್ಮಣಗಿ, ಪ್ರಧಾನ ವ್ಯವಸ್ಥಾಪಕ ಸುನಿಲ್ ಬೆಲ್ಲದ, ಬ್ಯಾಂಕಿನ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT